ಕಾಂಗ್ರೆಸ್ ಪಕ್ಷದ 139ನೇ ಸಂಸ್ಥಾಪನಾ ದಿನಾಚರಣೆ

ವಿಜಯಪುರ,29:ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕಾಂಗ್ರೆಸ್ ಪಕ್ಷದ 139ನೇ ಸಂಸ್ಥಾಪನಾ ದಿನಾಚರಣೆಯನ್ನು ಕಾರ್ಯಾಲಯದ ಆವರಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ ಮುಶ್ರೀಫ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಈ ದೇಶದ ಇತಿಹಾಸ ಕಂಡ ಪ್ರಮುಖ ರಾಜಕೀಯ ಪಕ್ಷ ಹಾಗೂ ಜನಪರತೆಯ ಆಧಾರದ ಮೇಲೆ ಎಲ್ಲ ವರ್ಗಗಳ ಏಳಿಗೆಗಾಗಿ ಶ್ರಮಿಸುತ್ತ ಸಮಾನ ಅವಕಾಶಗಳನ್ನು ಸೃಷ್ಟಿಸಿದ ಕಾಂಗ್ರೆಸ್ ಪಕ್ಷದ 139ನೇ ಸಂಸ್ಥಾಪನಾ ದಿನಾಚರಣೆ ಇಂದು ಸ್ವಾತಂತ್ರ್ಯಾ ನಂತರದಲ್ಲಿ ಅತ್ಯಂತ ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸೇವಾದಳದ ವತಿಯಿಂದ ಪ್ರತಿಜ್ಞಾವಿಧಿ ಓದಿ ಸ್ವೀಕರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ಚಾಂದಸಾಬ ಗಡಗಲಾವ, ವೈಜನಾಥ ಕರ್ಪೂರಮಠ, ಡಾ. ಗಂಗಾಧರ ಸಂಬಣ್ಣಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಮೀರಅಹ್ಮದ ಬಕ್ಷಿ, ಜಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಆರತಿ ಶಹಾಪೂರ, ಅಬ್ದುಲ್‍ರಜಾಕ ಹೊರ್ತಿ, ದಿನೇಶ ಹಳ್ಳಿ, ಕಾಂಗ್ರೆಸ್ ಮುಖಂಡರಾದ ಬಲರಾಮ ನಾಯಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಸಂತ ಹೊನಮೊಡೆ, ಶರಣಪ್ಪ ಯಕ್ಕುಂಡಿ, ಈರಪ್ಪ ಜಕ್ಕಣ್ಣವರ, ಅಬ್ದುಲ್‍ಪೀರಾ ಜಮಖಂಡಿ, ಜಿಲ್ಲಾ ಕಾಂಗ್ರೆಸ್ ಅಂಗ ಘಟಕಗಳ ಅಧ್ಯಕ್ಷರುಗಳಾದ ನಿಂಗಪ್ಪ ಸಂಗಾಪೂರ, ಲಾಲಸಾಬ ಕೊರಬು, ರಾಜೇಶ್ವರಿ ಚೋಳಕೆ, ಸಂತೋಷ ಬಾಲಗಾಂವಿ, ಎಂ.ಎ. ಬಕ್ಷಿ, ಮಲ್ಲಿಕಾರ್ಜುನ ಗಬಸಾವಳಗಿ, ಪ್ರದೀಪ ಸೂರ್ಯವಂಶಿ, ಅಬುಬಕರ ಕಂಬಾಗಿ, ದಸ್ತಗೀರ ಸಾಲೋಟಗಿ, ರಜಾಕ ಕಾಖಂಡಕಿ, ಕಾಶಿಬಾಯಿ ಹಡಪದ, ಮೃತ್ಯುಂಜಯ ಪುರ್ತುಗೇರಿಮಠ ಮುಂತಾದವರು ಉಪಸ್ಥಿತರಿದ್ದರು.