(ಸಂಜೆವಾಣಿ ವಾರ್ತೆ)
ಬಳ್ಳಾರಿ, ಏ.28: ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇ. 50ರಿಂದ 75ರ ವರೆಗೆ ಹೆಚ್ಚಿಸಿ. ಎಲ್ಲಾ ಸಮುದಾಯಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯನ್ನು ನೀಡುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ನಿನ್ನೆ ಜಿಲ್ಲೆಯ ಸಿರುಗುಪ್ಪ ನಗರದ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡುತ್ತಿದ್ದರು.
ರಾಜ್ಯದೆಲ್ಲಡರ ಕಾಂಗ್ರೆಸ್ ಪರ ಅಲೆ ಇದೆ. 130 ಕ್ಕೂ ಹೆಚ್ಚು ಸ್ಥಾನ ಪಡೆದು ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಸತ್ಯ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಜನ ಪೂರ್ಣ ಬಹುಮತ ಕೊಡಲಿಲ್ಲ. ಇದರಿಂದ ಬಿಜೆಪಿಯವರು ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್‌ನ 14 ಮತ್ತು ಜೆಡಿಎಸ್ ನ ಮೂರು ಒಟ್ಟು 17 ಶಾಸಕರನ್ನು ಖರೀದಿಸಿ, ಕೋಟಿಗಟ್ಟಲೆ ಹಣ ನೀಡಿ ಸರ್ಕಾರ ರಚಿಸಿದ್ದಾರೆ ಆದ್ದರಿಂದ ಬೊಮ್ಮಾಯಿ ಅವರರದು ಅನೈತಿಕ ಸರ್ಕಾರ ಎಂದರು.
ಕೆಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ ಮಾತನಾಡಿ. ಕಾಂಗ್ರೆಸ್ ಪಕ್ಷವೇ ಲಿಂಗಾಯತರಿಗೆ ಹೆಚ್ಚಿನ ಮಹತ್ವ ನೀಡಿದೆ. ಅದಕ್ಕೆ ನಾನೇ ಸಾಕ್ಷಿಯಾಗಿರುವೆ, ರಾಜ್ಯದಲ್ಲಿ, ವೀರೇಂದ್ರ ಪಾಟೀಲ್, ನಿಜಲಿಂಗಪ್ಒ, ಎಸ್.ಆರ್ ಕಂಟಿ ಮೊದಲಾದವರು ಸಿಎಂ ಆಗಿದ್ದನ್ನು ಸ್ಮರಿಸಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ನೀವು ಸಿರುಗುಪ್ಪದಲ್ಲಿ ನಾಗರಾಜ್ ಅವರನ್ನು ಆಯ್ಕೆ ಮಾಡಿ ಎಂದ ಮತದಾರರಲ್ಲಿ ಕೋರಿದರು.
ಕಾಂಗ್ರೆಸ್ ಅಭ್ಯರ್ಥಿ ಬಿ.ಎಂ ನಾಗರಾಜ ಮಾತನಾಡಿ, 2013ರ ಚುನಾವಣೆಯಲ್ಲಿ ಗೆದ್ದಾಗ ಪ್ರಾಮಾಣಿಕವಾಗಿ ಅಭಿವೃದ್ಧಿ ಮಾಡಿದ್ದೇನೆ. ಮತ್ತೊಮ್ನೆ ಗೆಲ್ಲಿಸುವಂತೆ ಕೋರಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಟಿ.ಎಂ ಚಂದ್ರಶೇಖರಯ್ಯಸ್ವಾಮಿ, ಪ್ರಕಾಶ್ ರಾಠೋಡ್,
ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೆ. ಡಿ. ಶೀಲಂ, ಮಾಜಿ ಎಂಎಲ್ಸಿ ಕೆ.ಎಸ್ .ಎಲ್ ಸ್ವಾಮಿ, ಜಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ಚೊಕ್ಕ ಬಸವನಗೌಡ ಮೊದಲಾದವರು ಇದ್ದರು.