ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್‍ಗೆ ಸೇರ್ಪಡೆ

ಹನೂರು:ಮಾ:25: ಪಟ್ಟಣ ಪಂಚಾಯಿತಿ ಮಾಜಿ ಸದಸ್ಯೆ ಸಾವಿತ್ರಮ್ಮ ಕಾಂಗ್ರೇಸ್ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾ ಧ್ಯಕ್ಷ ಎಂ.ಆರ್.ಮಂಜುನಾಥ್ ಅವರ ಜನಪರ ಕಾರ್ಯವೈಖರಿಯನ್ನು ಮೆಚ್ಚಿ ಜೆಡಿಎಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದೇನೆ ಎಂದು ತಿಳಿಸಿದರು.
ಈ ವೇಳೆ ಎಂ.ಆರ್.ಮಂಜುನಾಥ್ ಜೆಡಿಎಸ್ ಪಕ್ಷದ ಚಿಹ್ನೆಯನ್ನು ಒಳಗೊಂಡ ಸಾಲನ್ನು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ಎಂ.ಆರ್.ಮಂಜುನಾಥ್ ಪಕ್ಷದ ತತ್ವ ಸಿದ್ದಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿ.ಪಂ.ಮಾಜಿ ಉಪಾಧ್ಯಕ್ಷ ಶಿವಮೂರ್ತಿ, ಮುಖಂಡರುಗಳಾದ ಮುಳ್ಳೂರು ಶಿವಮಲ್ಲು, ಮಂಜೇಶ್, ಸತೀಶ್, ಕಿರಣ್, ಗೋವಿಂದ, ವೆಂಕಟೇಶ್, ಪ.ಪಂ.ಸದಸ್ಯರಾದ ಮುಮತಾಜ್‍ಬಾನು, ಆನಂದ್‍ಕುಮಾರ್, ಮಹೇಶ್‍ನಾಯಕ, ಮಹೇಶ್ ಜೆಡಿಎಸ್ ಮುಖಂಡರುಗಳು ಮತ್ತು ಕಾರ್ಯಕರ್ತರು ಇದ್ದರು.