(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ:ಏ,17- ನನಗೆ ಕಾಂಗ್ರೆಸ್ ಟಿಕೆಟ್ ನೀಡದ ಕಾರಣ,ನನ್ನ ರಾಜಕೀಯ ಅಸ್ತಿತ್ವಕ್ಕಾಗಿ ಈ ಬಾರಿ ಬಳ್ಳಾರಿ ನಗರ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಮಾಜಿ ಶಾಸಕ ಅನಿಲ್ ಲಾಡ್ ಹೇಳಿದ್ದಾರೆ.
ಅವರು ಇಂದು ನಗರದಲ್ಲಿನ ಬಳ್ಳಾರಿ ಪತ್ರಕರ್ತರ ಒಕ್ಕೂಟದ ಸಭಾಂಗಣದಲ್ಲಿ ಸುದ್ದಿಗೋಷ್ಟಿ ನಡೆಸಿ ಈ ವಿಷಯ ತಿಳಿಸಿದರು.
ಕಡಿಮೆ ಮತಗಳ ಅಂತರದಿಂದ ಕಳೆದ ಚುನಾವಣೆಯಲ್ಲಿ ಸೋತ ನನಗೆ ಟಿಕೆಟ್ ತಪ್ಪಿಸಲು ಸ್ಪಷ್ಟ ಕಾರಣ ಹೇಳಿಲ್ಲ. ಅದಕ್ಕಾಗಿ ಬೆಂಬಲಿಗರ ಆಶಯದಂತೆ ಬಂಡಾಯವಾಗಿ ಸ್ಪರ್ಧೆ ಮಾಡಲು ಬಯಸಿರುವೆ ಎಂದರು.
ನಾನು ದೆಹಲಿಗೆ ಹೋಗಿ ಕ್ಷೇತ್ರದಲ್ಲಿನ ವಾಸ್ತವಾಂಶಗಳನ್ನು ಎಐಸಿಸಿ ಮುಖಂಡರಾದ ಸೋನಿಯಾಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಿತ್ತು. ಡಿಕೆಶಿ ಮತ್ತು ಸಿದ್ದರಾಮಯ್ಯ ಅವರನ್ನು ಕಾಣಲು ಪ್ರಯತ್ನಿಸಿದೆ ಆದರೆ ಆಗಲಿಲ್ಲ.
ಕೂಡ್ಲಿಗಿಯ ಬಿಜೆಪಿ ಶಾಸಕರಾಗಿದ್ದ ಎನ್.ವೈ.ಗೋಪಾಲಕೃಷ್ಣ ಅವರಿಗೆ, ವಿಜಯನಗರದ ಮಾಜಿ ಶಾಸಕ ಗವಿಯಪ್ಪ ಅವರಿಗೆ ಟಿಕೆಟ್ ನೀಡಿದೆ.
ಕಲಘಟಿಯಲ್ಲಿ 25 ಸಾವಿರ ಮತಗಳಿಂದ ಸೋತ ಸಂತೋಷ್ ಲಾಡ್ ಗೆ ಟಿಕೆಟ್ ನೀಡಿದ್ದೀರಿ, ನಿನ್ನೆ ಪಕ್ಷ ಬಿಡುವ ಬಿಜೆಪಿಯವರಿಗೆ ಮತ ಕೊಡುತ್ತೀರಿ ಇದಕ್ಕೆ ಯಾವ ಮಾನದಂಡ.
ಅದೇ ರೀತಿ. ಯಾವ ಮಾನದಂಡದ ಮೇಲೆ ಬಳ್ಳಾರಿ ನಗರದ ಟಿಕೆಟ್ ನ್ನು ಭರತ್ ರೆಡ್ಡಿಗೆ ಕೊಟ್ಟಿದೆ.
ಬಳ್ಳಾರಿಯ ಕಾರ್ಪೊರೇಷನ್ ಕಾಂಗ್ರೆಸ್ ತೆಕ್ಕೆಗೆ ಬರಲು ನಾನು ಕಾರಣ. ನಾನು 19 ಇಲ್ಲ 20 ರಂದು ನಾಮಪತ್ರ ಸಲ್ಲಿಸುವ ಬಗ್ಗೆ ಆಲೋಚಿಸಿರುವೆಂದರು.
ಕಾಂಗ್ರೆಸ್ ಪಕ್ಷದಿಂದ ನನಗೆ ಅನ್ಯಾಯವಾಗಿದೆಂದು ಇಂದಿನಿಂದ ಚುನಾವಣೆ ಮುಗಿಯುವ ವರೆಗೆ ಕಪ್ಪುಬಟ್ಟೆ ಧರಿಸುವೆ ಎಂದರು. ಕುಕ್ಕರ್ ಕೊಟ್ಟಿದೆಂದು, ಬ್ಲಾಕ್ ಅಭಿಪ್ರಾಯ ಕೇಳಿದ್ದೀರಾ, ಅವರ ಸಮಾಜಿಕ ಸೇವೆ ಏನು ಎಂದು ಪ್ರಶ್ನೆ ಮಾಡಿದರು.
ಎರೆಡು ಬಾರಿ ಶಾಸಕನಾಗಿ ಒಂದು ಬಾರಿ ರಾಜ್ಯ ಸಭಾ ಸದಸ್ಯನಾದ ನಾನು ಅವರ ಜೊತೆ ಸೇರಿ ಹೋದರೆ ನನ್ನನ್ನೂ ಮ್ಯಾನೇಜ್ ಮಾಡಿದೆ ಎಂದು ಹೇಳಬಹುದು ಅದಕ್ಕಾಗಿ ನಾನು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವೆ ಎಂದರು.
ಬ್ರೂಸ್ ಪೇಟೆ ಬ್ಲಾಕ್ ಅಧ್ಯಕ್ಷ ಹರ್ಷದ್ ಗನಿ, ಮಲ್ಲಿಕಾರ್ಜುನ, ಕಿರಣ್, ದಾಸ್, ವೆಂಕಟೇಶ್ ಮೊದಲಾದವರು ಸುದ್ದಿಗೋಷ್ಟಿಯಲ್ಲಿ ಇದ್ದರು.