ಕಲಬುರಗಿ,ಜೂ.19-ಕೇಂದ್ರದ ಬಿಜೆಪಿ ಸರಕಾರ ಮಾಡುತ್ತಿರುವ ಅಕ್ಕಿ ರಾಜಕೀಯದ ಪಿತೂರಿಯನ್ನು ಖಂಡಿಸಿ ಜೂ.20 ರಂದು ಬೆಳಿಗ್ಗೆ 10 ಗಂಟೆಗೆ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ನೀಡಿದ ಭರವಸೆಯಂತೆ 10 ಕೆ.ಜಿ. ಅಕ್ಕಿ ನೀಡುವ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತರಲು ಪ್ರಯತ್ನಿಸಿದೆ. ಆದರೆ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿರುವುದನ್ನು ಸಹಿಸದ ಕೇಂದ್ರ ಬಿಜೆಪಿ ಸರ್ಕಾರ ಅದರ ಅಧೀನ ಸಂಸ್ಥೆಯಾದ ಎಫ್.ಸಿ.ಐ.ಗೆ ಅಕ್ಕಿಯನ್ನು ನೀಡದಂತೆ ತಾಕೀತು ಮಾಡಿದೆ. ಕೇಂದ್ರ ಸರಕಾರದ ಈ ಅಕ್ಕಿ ರಾಜಕೀಯದ ಪಿತೂರಿ ಬಗ್ಗೆ ಸಾಮಾನ್ಯ ಜನರಿಗೆ ತಿಳಿಸಲು ರಾಜ್ಯದಾದ್ಯಂತ ಜೂ.20 ರಂದು ಎಲ್ಲಾ ಜಿಲ್ಲಾ ಕೆಂದ್ರಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆಯನ್ನು ಮಾಡಲು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ರವರು ಸೂಚಿಸಿದ್ದು, ಇದರ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಜೂ.20 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಎಂ.ಖರ್ಗೆ, ಸಚಿವÀ ಡಾ.ಶರಣಪ್ರಕಾಶ ಆರ್.ಪಾಟೀಲ, ಶಾಸಕರಾದ ಡಾ: ಅಜಯಸಿಂಗ್, ಕನೀಜ್ ಫಾತಿಮಾ, ಎಂ.ವಾಯ್. ಪಾಟೀಲ, ಬಿ.ಆರ್.ಪಾಟೀಲ, ಅಲ್ಲಮಪ್ರಭು ಪಾಟೀಲ ಪ್ರತಿಭಟನೆಯಲ್ಲಿ ಭಾಗವಹಿಸುವರು. ಪಕ್ಷದ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು, ಡಿಸಿಸಿ ಡೇಲಿಗೇಟ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ವಿವಿಧ ಮೂಂಚೂಣಿ ಘಟಕ, ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್, ತಾಲೂಕಾ ಪಂಚಾಂiÀiತ್, ಗ್ರಾಮ ಪಂಚಾಯತ್, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ್, ಎಪಿಎಂಸಿಯ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಮಹಾ ನಗರ ಪಾಲಿಕೆಯ ಮಾಜಿ ಪೂಜ್ಯ ಮಹಾಪೌರರು, ಉಪ ಮಹಾಪೌರರು ಹಾಗೂ ಹಾಲಿ ಮತ್ತು ಮಾಜಿ ಸದಸ್ಯರುಗಳು, ಮಹಿಳೆಯರು, ಯುವಕರು ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಈ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.