ಕಾಂಗ್ರೆಸ್ ಬೆಂಬಲಿಸಲು ಮೊಯ್ಲಿ ಮನವಿ

ವಿಜಯಪುರ.ಏ೨೩:ಬಿಜೆಪಿ ಸರಕಾರ ೪೦% ಸರಕಾರವಾಗಿದ್ದು ಇವರು ಯಾವುದೇ ಅಭಿವೃದ್ಧಿ ಕೆಲಸ ಮಾಡಲ್ಲ ಆದಕಾರಣ ಈ ಬಾರಿ ಕಾಂಗ್ರೆಸ್ ಸರಕಾರ ಬೆಂಬಲಿಸಬೇಕು ಎಂದು ಮಾಜಿ ಸಂಸದ ವೀರಪ್ಪಮೊಯ್ಲಿ ಹೇಳಿದರು.
ಇವರು ಸಮೀಪದ ಮಂಡಿಬೆಲೆ ಗ್ರಾಮದಲ್ಲಿ ತಾಲೂಕು ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಪರ ಮತಯಾಚನೆ ಮಾಡಿ ಮಾತನಾಡಿದರು.
ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಮಾತನಾಡಿ, ದೇಶದಲ್ಲಿ ರೈತರು ಕಂಗಲಾಗಿ ಹೋಗಿದ್ದಾರೆ, ಯುವಕರಿಗೆ ಕೆಲಸವಿಲ್ಲ, ನಿರುದ್ಯೋಗ ಹೆಚ್ಚಾಗಿದೆ ದೇಶ ಹಾಗೂ ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು ಈ ಬಾರಿ ಕಾಂಗ್ರೆಸ್ ಸರಕಾರಕ್ಕೆ ಬಹುಮತ ನೀಡಬೇಕು ಎಂದರು.
ಮಾಜಿ ಶಾಸಕ ಮುನಿನರಸಿಂಹಯ್ಯ ಮಾತನಾಡಿ, ಕಾಂಗ್ರೆಸ್ ಸರಕಾರಕ್ಕೆ ಇತಿಹಾಸವಿದೆ ನಮ್ಮಗೆ ಸ್ವತಂತ್ರ ತಂದುಕೊಟ್ಟಿದು ಕಾಂಗ್ರೆಸ್ ಸರಕಾರ, ಬಿಜೆಪಿ ಸರಕಾರ ಬರೀ ಓಟ್ ಬ್ಯಾಂಕ್ ಕೆಲಸ ಮಾಡುತ್ತಿದೆ, ಬಿಜೆಪಿ ಸರಕಾರ ಬಂದ ಮೇಲೆ ನೋಟ್ ಬ್ಯಾನ್ ಮಾಡಿ ಜನಸಾಮಾನ್ಯರಿಗೆ ಸಾಕಷ್ಟು ಕಷ್ಟ ಅನುಭವಿಸಿದರು.
ಯಾವುದೇ ಗ್ರಾಮದಲ್ಲಿ ಯಾರಿಗೂ ಒಂದು ಮನೆ ಕೊಟ್ಟಿಲ್ಲ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಂಸದ ಸಿ.ನಾರಾಯಣಸ್ವಾಮಿ, ಜಗನ್ನಾಥ್, ಚಿನ್ನಪ್ಪ, ಶಾಂತ್ ಕುಮಾರ್, ದೇವರಾಜಪ್ಪ, ಚನ್ನಹಳ್ಳಿ ರಾಜಣ್ಣ, ಮಾಜಿ ಜಿಲ್ಲಾ ಪಂ. ಸದಸ್ಯ ಲಕ್ಷ್ಮೀನಾರಾಯಣಪ್ಪ, ಯಲುವಹಳ್ಳಿ ನಟರಾಜು, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಚಂದ್ರಪ್ಪ, ದೇವನಹಳ್ಳಿ ಬ್ಲಾಕ್ ಅಧ್ಯಕ್ಷ ಪ್ರಸನ್ನಕುಮಾರ್, ಕಾರ್ಯದರ್ಶಿ ಎಸ್.ಪಿ.ಮುನಿರಾಜು, ಚಂದೇನಹಳ್ಳಿ ಮುನಿಯಪ್ಪ, ನಾರಾಯಣಸ್ವಾಮಿ, ಮಂಜುನಾಥ್, ಗೊಡ್ಲುಮುದ್ದೇನಹಳ್ಳಿ ಮುನಿರಾಜ್, ಯಲುವಹಳ್ಳಿ ರಮೇಶ್, ಮೀನಾಕ್ಷಿ, ಗೋಪಲ್ ಕೃಷ್ಣ, ರಾಜಣ್ಣ, ಇತರರು ಇದ್ದರು.