
ಮಾಲೂರು,ಮಾ.೩೦- ಬಿಜೆಪಿ ಭ್ರಷ್ಟಾಚಾರ ಹಗರಣಗಳ ಸುಳಿಯಲ್ಲಿ ಸಿಲುಕಿರುವ ಜನವಿರೋಧಿ ಬಿಜೆಪಿ ಸರ್ಕಾರವನ್ನು ರಾಜ್ಯದ ಜನತೆ ತಿರಸ್ಕರಿಸಿ ಸುಭದ್ರ ಸರ್ಕಾರಕ್ಕಾಗಿ ಜನಪರ ಯೋಜನೆಗಳ ಅನುಷ್ಠಾನಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಶಾಸಕ ಕೆ.ವೈ.ನಂಜೇಗೌಡ ಹೇಳಿದರು
ತಾಲ್ಲೂಕಿನ ಕುಡಿಯನೂರು ಗ್ರಾಮದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಕಳೆದ ಐದು ವರ್ಷಗಳ ಹಿಂದೆ ತಾಲೂಕಿನಲ್ಲಿ ನನ್ನನ್ನು ಶಾಸಕರನ್ನಾಗಿ ಆಯ್ಕೆ ಮಾಡಿದ ಜನರ ಋಣ ತೀರಿಸಲು ಬಡವರು ಸಾಮಾನ್ಯ ಜನರ ರೈತರು ಕಷ್ಟಸುಖ ದುಃಖಗಳಲ್ಲಿ ಬಾಗಿಯಾಗಿ ಅವರ ಸಮಸ್ಯೆ ಗಳಿಗೆ ಸ್ಪಂದಿಸುವ ಮೂಲಕ ಸರ್ಕಾರದಿಂದ ಬರುವ ಅನುದಾನಗಳನ್ನು ಸಮರ್ಪಕ ಬಳಸಿಕೊಂಡು ತಾಲೂಕಿನಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗಿದೆ
ಶಾಸಕರಾಗಿ ಆಯ್ಕೆಯಾದ ಮೇಲೆ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಅನುದಾನಗಳನ್ನು ತಂದು ತಾಲೂಕಿನಲ್ಲಿ ಅಭಿವೃದ್ಧಿ ಮಾಡಲಾಯಿತು ನಂತರ ಬಂದ ಬಿಜೆಪಿ ಸರ್ಕಾರದಲ್ಲಿ ತಾಲೂಕಿನ ಅಭಿವೃದ್ಧಿಗೆ ಸಮರ್ಪಕ ಅನುದಾನಗಳು ಸಿಗಲಿಲ್ಲ ಆದರೂ ಸಹ ಬಿಜೆಪಿಯವರು ಸರ್ಕಾರ ರಚನೆ ಮಾಡುವಾಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲು ಆಸೆ ಆಮಿಷಗಳು ತೋರಿಸಿದರು ಅವರ ಮಾತಿಗೆ ಮರುಳಾಗದೆ ಕ್ಷೇತ್ರದ ಕಾರ್ಯಕರ್ತರು ಹಾಗೂ ಮುಖಂಡರ ಹಿತದೃಷ್ಟಿಯಿಂದ ಕಾಂಗ್ರೆಸ್ ಪಕ್ಷ ತೊರೆಯುವ ಕೆಲಸ ಮಾಡಲಿಲ್ಲ ಸರ್ಕಾರ ಇಲ್ಲದಿದ್ದರೂ ಸಹ ಕಾಂಗ್ರೆಸ್ ಪಕ್ಷದಿಂದ ಹಾಗೂ ವೈಯಕ್ತಿಕವಾಗಿ ಕೋವಿಡ್ ಮೊದಲನೇ ಅಲೆ ಹಾಗು ಎರಡನೇ ಅಲೆಯಲ್ಲಿ ಜನಸಾಮಾನ್ಯರಿಗೆ ಸ್ಪಂದಿಸಿ ಉತ್ತಮ ರೀತಿಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ ಅಲ್ಲದೆ ಜನಸಾಮಾನ್ಯರಿಗೂ ಸಹ ಸಹಕಾರ ನೀಡಲಾಗಿದೆ.
ಈಗಿನ ಬಿಜೆಪಿ ಸರ್ಕಾರದಲ್ಲಿ ಹಲವಾರು ಹಗರಣಗಳು ನಡೆದಿದೆ ಪಿಎಸ್‌ಐ ಹಗರಣ ಇತ್ತೀಚಿಗೆ ಚನ್ನಗಿರಿ ಮಾಡಳ್ ವಿರೂಪಾಕ್ಷಪ್ಪ ಅವರ ಪುತ್ರ ಕೋಟಿ ಕೋಟಿ ಹಣ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಸಿಲುಕಿ ಶಾಸಕನಾಪತ್ತೆ ಇದೊಂದು ಶೇಕಡಾ ೪೦% ಕಮಿಷನ್ ಸರ್ಕಾರ ಇದೊಂದು ಕೆಟ್ಟ ಭ್ರಷ್ಟ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಜನಸಾಮಾನ್ಯರಿಗಾಗಿ ಯಾವುದೇ ರೀತಿಯ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಸರ್ಕಾರವಾಗಿದೆ ಎಂದ ಅವರು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ರಾಜಕೀಯ ಲಾಭಕ್ಕಾಗಿ ವಿವಿಧ ಸಮುದಾಯಗಳಿಗೆ ಮೀಸಲಾತಿಯನ್ನು ಘೋಷಣೆ ಮಾಡಿ ಮುಸ್ಲಿಂ ಸಮುದಾಯಕ್ಕೆ ನೀಡಿದ ಮೀಸಲಾತಿಯನ್ನು ಹಿಂಪಡೆದು ಇತರೆ ಸಮುದಾಯಗಳಿಗೆ ನೀಡುವ ಮೂಲಕ ರಾಜ್ಯದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದೆ ಎಂದರು.