ಕಾಂಗ್ರೆಸ್ ಭವನದಲ್ಲಿ ಸಮರ್ಪಣಾ ದಿವಸ್

ಮೈಸೂರು,ಡಿ.28:- 135 ನೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಂಸ್ಥಾಪನ ದಿನವನ್ನು ಇಂದು ನಗರದ ಕಾಂಗ್ರೆಸ್ ಭವನದಲ್ಲಿ ಸಮರ್ಪಣಾ ದಿವಸ್ ಎಂದು ಆಚರಣೆ ಮಾಡಲಾಯಿತು.
ಕಾರ್ಯಕ್ರಮಕ್ಕೆ ಮಾಜಿ ಶಾಸಕ ವಾಸು ಚಾಲನೆ ನೀಡಿದರು. ಮೈಸೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಸಮರ್ಪಣಾ ದಿವಸ್ ಹಿನ್ನಲೆಯಲ್ಲಿ ಪಕ್ಷ ಕಟ್ಟಿ ಬೆಳೆಸಿದ ನಾಯಕರನ್ನು ಕಾಂಗ್ರೆಸ್ ಮುಖಂಡರು,ನಾಯಕರು ನೆನೆದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಜಿಲ್ಲಾಧ್ಯಕ್ಷ ವಿಜಯಕುಮಾರ್,ನಗರಾಧ್ಯಕ್ಷ ಆರ್ ಮೂರ್ತಿ ಸೇರಿದಂತೆ ಸ್ಥಳೀಯ ಮುಖಂಡರು ಭಾಗಿಯಾಗಿದ್ದರು.