
ದಾವಣಗೆರೆ.ಮೇ.೧೨; ವಿಧಾನಸಭಾ ಚುನಾವಣೆ ಮುಗಿದಿದ್ದು ಅಭ್ಯರ್ಥಿಗಳ ಭವಿಷ್ಯ ಇವಿಎಂ ಮಿಷಿನ್ ಗಳಲ್ಲಿ ಭದ್ರವಾಗಿ ಸೇರಿದೆ, ದಾವಣಗೆರೆ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಇವಿಎಂ ಮಿಷಿನ್ ಗಳು, ದಾವಣಗೆರೆ ವಿಶ್ವವಿದ್ಯಾನಿಲಯದ ಸ್ಟ್ರಾಂಗ್ ರೂಮಿನಲ್ಲಿ ಇರಿಸಲಾಗಿದೆ.ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯರಾದ ಗಡಿಗುಡಾಳ್ ಮಂಜುನಾಥ್, ಎ. ನಾಗರಾಜ್, ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷ ಕೆ.ಎಲ್.ಹರೀಶ್ ಬಸಾಪುರ, ಪಕ್ಷದ ಮುಖಂಡರಾದ ಚೆಲುವಪ್ಪ, ಮಾಲತೇಶ್ ಸ್ಟ್ರಾಂಗ್ ರೂಮ್ ಗೆ ಭೇಟಿ ನೀಡಿದ್ದರು.