
ಕಲಬುರಗಿ,ಜು 11 :ಎಐಸಿಸಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವರಿಷ್ಠ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ಸೇಡಿನ ಕ್ರಮಗಳನ್ನು ಅನುಸರಿಸುತ್ತಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದ್ದು,
ಬಿಜೆಪಿಯವರ ನಡೆಯನ್ನು ಖಂಡಿಸಿ ಕೆಪಿಸಿಸಿ ಆದೇಶದಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಾಳೆ ( ಜು.12) ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕಲಬುರಗಿ ನಗರದ ಇಂದಿರಾ ಸ್ಮಾರಕ ಭವನ ಹತ್ತಿರವಿರುವ (ಟೌನ್‍ಹಾಲ್ ಹತ್ತಿರ) ರಾಷ್ಟ್ರಪಿತ ಮಹಾತ್ಮ ಗಾಂಧಿಜೀಯವರ ಪ್ರತಿಮೆ ಹತ್ತಿರ ಒಂದು ದಿನದ ಮೌನ ಸತ್ಯಾಗ್ರಹವನ್ನು (ಮೌನ ಪ್ರತಿಭಟನೆ) ಹಮ್ಮಿಕೊಳ್ಳಲಾಗಿದೆ.
ಈ ಮೌನ ಸತ್ಯಾಗ್ರಹಕ್ಕೆ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು,ಅಭಿಮಾನಿಗಳು ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಆಗಮಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ ಕೋರಿದ್ದಾರೆ.