ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ.


ಸಂಜೆವಾಣಿ ವಾರ್ತೆ
ಹೊಸಪೇಟೆ ಡಿ23: ಕಾಂಗ್ರೆಸ್ ಆಡಳಿತಕ್ಕೆ ಬಂದು 7ತಿಂಗಳಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ದಲಿತರಿಗೆ ಹಿಂದೂಳಿದವರಿಗೆ ಕಿಂಚಿತ್ತು ರಕ್ಷಣೆಯಿಲ್ಲದಂತಾಗಿದೆ ಎಂದು ಬಿಜೆಪಿ ಜಿಲ್ಲಾ ಎಸ್ ಸಿ ಮೋರ್ಚಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ನಾಯ್ಕ ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ಪತ್ರಿಕಾಭವನದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ  7 ತಿಂಗಳಿಂದ ಅನೇಕ ದಲಿತ ಹಾಗೂ ಹಿಂದೂಳಿದ ವರ್ಗಗಳ ಮೇಲೆ ಅನೇಕ ದೌರ್ಜನ್ಯ   ನಿರಂತರವಾಗಿ ನಡೆಯುತ್ತಿದ್ದು ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡುತ್ತಿದೆ  ಎಂದು ಆಗ್ರಹಿಸಿದರು. ಶಿವಮೊಗ್ಗದಲ್ಲಿ ಮುಸ್ಲಿಂ ಯುವಕರಿಂದ ಹಿಂದೂಮನೆಗಳ ಮೇಲೆ ದಾಳಿ‌, ಉಡಪಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಮುಸ್ಲಿಂ ಮಹಿಳೆಯರಿದ ನಡೆದ ಶೌಚಾಲಯ ವಿಡಿಯೋ ಮಾಡಿದ ಘಟನೆ, ಮೈಸೂರು ಮತ್ಯ ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯ ಪ್ರಕರಣ, ಮಾಜಿ ಉಪ ಮುಖ್ಯ ಮಂತ್ರಿ ಗೋವಿಂದ ಕಾರಜೋಳ ಪತ್ರಿಕಾಗೋಷ್ಠಿಯಲ್ಲಿ ಗೂಂಡಾಗಿರಿ ವಂಟೂರಿನಲ್ಲಿ ದಲಿತ ಮಹಿಳೆಯ ವಿವಸ್ತ್ರ ಪ್ರಕರಣ ಸೇರಿದಂತೆ ಅನೇಕ ದಲಿತ ವಿರೋಧಿ ನೀತಿ ರಕ್ಷಣೆಯಿಲ್ಲದಂತಾಗಿದೆ
ಇನ್ನು ಪರಿಶಿಷ್ಟ ಜಾತಿ, ಪಂಗಡಗಳ ಮಹಿಳೆಯರು ಹಾಗೂ ಮಕ್ಕಳ ಮೇಲೆ ನಿರಂತರ ಪ್ರಕರಣ 40%  ವೃದ್ಧಿ ಯಾಗಿದ್ದು ಇನ್ನು ಕೊಲೆ, ದರೋಡೆ ಪ್ರಕರಣಗಳು ಶೇಕಡಾ48% ವೃದ್ಧಿಯಾಗಿದ್ದು ತಕ್ಷಣವೇ ತಡೆಗೆ ಮುಂದಾಗದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಕಠಿಣ ಕ್ರಮಕ್ಕೆ ಆಗ್ರಹಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಹೊಸಪೇಟೆ ಮಂಡಲ ಅಧ್ಯಕ್ಷ ಕಸಾಟಿ ಉಮಾಪತಿ, ತಾಲೂಕಾ ಮಂಡಲ ಮಾಧ್ಯಮ ಸಂಚಾಲಕಿ ಅನುರಾಧ ಗೋಷ್ಠಿಯಲ್ಲಿ ಹಾಜರಿದ್ದರು.