ಕಾಂಗ್ರೆಸ್ ಶಾಸಕನ ಪುತ್ರನಿಂದ ಅತ್ಯಾಚಾರ ಆರೋಪ-ದೂರು


ಭೂಪಾಲ್, ಏ.೪- ಉಜ್ಜಯಿನಿ ಜಿಲ್ಲೆಯ ಕಾಂಗ್ರೆಸ್ ಶಾಸಕನ ಪುತ್ರನ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.
ಇಂದೋರ್ ಮೂಲದ ಮಹಿಳೆಯೊಬ್ಬರು ಆರೋಪ ಮಾಡಿದ್ದು, ಕಾರ್ಯಕ್ರಮವೊಂದರಲ್ಲಿ ಪರಿಚಯ ಆಗಿರುವ ಶಾಸಕರ ಮಗ, ನಂತರ ಸ್ನೇಹಿತರಾಗಿದ್ದವು. ಆದರೆ, ಆತ ನನ್ನನ್ನು ಮದುವೆ ಆಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆಕೆ ದೂರಿನಲ್ಲಿ ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು, ಇಂದೋರ್ ನಿವಾಸಿಯಾಗಿರುವ ಸಂತ್ರಸ್ತೆ ಪೊಲೀಸ್ ಠಾಣೆಗೆ ಬಂದು ದೂರು ಸಲ್ಲಿಸಿದ್ದಾರೆ. ಈ ಸಂಬಂಧ ನಾವು ಐಪಿಸಿಯ ಸೆಕ್ಷನ್ ೩೭೬ ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ತನಿಖೆಯೂ ಕೈಗೊಳ್ಳಲಾಗಿದೆ ಎಂದು ಹೇಳಿದರು.