
ಕಲಬುರಗಿ ಡಿ 28: ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಇಂದು ಕಾಂಗ್ರೆಸ್ ಸಂಸ್ಥಾಪನಾ ದಿನವನ್ನು ಕಾಂಗ್ರೆಸ್ ಪಕ್ಷದ ಧ್ವಜ ಹಾರಿಸುವಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂವಿಧಾನದ ಮುನ್ನುಡಿಯನ್ನು ಓದಿ ಪ್ರತಿಜ್ಞೆ ಪ್ರತಿ
ಸ್ವೀಕರಿಸುವ ಮೂಲಕ ಕಾಂಗ್ರೆಸ್ ಹಿರಿಯ ಮುಖಂಡರಾದ ಬಾಬುರಾವ ಜಾಗೀರದಾರ, ನಾರಾಯಣರಾವ ಕಾಳೆ,ಆಲಮಖಾನ, ಸಜ್ಜಾದ ಹುಸೇನ ಮೈನಾಳ, ಬಾಬುರಾವ ತುಂಬಾ, ವೀರಣಗೌಡ ಮಲ್ಲಾಬಾದಿ, ಸವಿತಾ ಸಜ್ಜನ್ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ ಹಾಗೂ ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು “ಕಾಂಗ್ರೆಸ್ಪಕ್ಷ ಭಾರತ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟಮಾಡಿದ ಪಕ್ಷವಾಗಿದ್ದು, ಅನೇಕಸ್ವಾತಂತ್ರ್ಯ ಹೋರಾಟಗಾರರು ಬ್ರಿಟಿಷರ ವಿರುದ್ಧಹೋರಾಟ ಮಾಡಿ ಬ್ರಿಟಿಷರಿಂದ ಭಾರತ ದೇಶದಸ್ವಾತಂತ್ರ್ಯವನ್ನು ಪಡೆದುಕೊಂಡರು. ಭಾರತದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಕಾಂಗ್ರೆಸ್ಮುಖಂಡರು ತಮ್ಮ ಜೀವನವನ್ನೇ ಮುಡುಪಿಟ್ಟು
ದೇಶಕ್ಕಾಗಿ ಪ್ರಾಣವನ್ನೇ ನೀಡಿದ್ದಾರೆ” ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ,ಮಾಜಿ ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರ, ಡಾ. ಕಿರಣ ದೇಶಮುಖ,ಭೀಮರಾವ ಟಿಟಿ, ಚಂದ್ರಿಕಾ ಪರಮೇಶ್ವರ, ಲತಾ ರವಿ ರಾಠೋಡ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.