ಕಾಂಗ್ರೆಸ್ ಸಂಸ್ಥಾಪನಾ ದಿನ

ಗಂಗಾವತಿ ಡಿ.29: ಕಾಂಗ್ರೆಸ್ ಸ್ವಾತಂತ್ರ್ಯ ಸಂಗ್ರಾಮದಿಂದ ಇಲ್ಲಿಯ ವರೆಗೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೇ ದೇಶದ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಿದೆ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ, ಮುಖಂಡ ವಿಶ್ವನಾಥ್ ಮಾಲಿಪಾಟೀಲ ಅಭಿಪ್ರಾಯ ಪಟ್ಟರು.
ಇಲ್ಲಿನ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರ ನಿವಾಸದ ಪಕ್ಷದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ 136ನೇ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಮನೋಹರಸ್ವಾಮಿ ಹಿರೇಮಠ, ಖಾಸಿಂಸಾಬ್ ಗದ್ವಾಲ್, ಮುಸ್ತಾಕ ಅಲಿ, ಯುವ ಕಾಂಗ್ರೆಸ್ ಅಧ್ಯಕ್ಷ ಆಸಿಫ್ ಹುಸೇನ್, ಆನಂದ್ ಹಸಲಕರ್, ಸಾಮಾಜಿಕ ಜಾಲತಾಣದ ಸಂಯೋಜಕ ಮಹಿಬೂಬ್, ಮುಖಂಡರಾದ ಜುಬೈರ್, ಅರ್ಜುನ್ ನಾಯಕ, ಫಾರೂಖ್, ಗುರು, ಆಸಿಫ್, ಮೊಯಿನ್, ಪರಗಿ ಪ್ರಹ್ಲಾದ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.