ಕಾಂಗ್ರೆಸ್ ಸದಸ್ಯರಿಂದ ಭದ್ರೆಗೆ ಬಾಗಿನ


ದಾವಣಗೆರೆ.ನ.೧೦; ದಾವಣಗೆರೆ ಮಹಾನಗರ ಪಾಲಿಕೆಯ ಕಾಂಗ್ರೆಸ್ ಪಕ್ಷದ ಸದಸ್ಯರು ಇಂದು ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ ಮತ್ತು ಮಾಜಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಮಾರ್ಗದರ್ಶನದಲ್ಲಿ ದಾವಣಗೆರೆ ಜಿಲ್ಲೆಯ ಜೀವನಾಡಿಯಾದ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಯಿತು. ಮಹಾನಗರ ಪಾಲಿಕೆಯ ವಿಪಕ್ಷ ನಾಯಕರಾದ ಎ.ನಾಗರಾಜ ಅವರ ನೇತೃತ್ವದಲ್ಲಿ ಮಹಾನಗರ ಪಾಲಿಕೆಯ ಸದಸ್ಯರುಗಳು ಭದ್ರಾ ಜಲಾಶಯಕ್ಕೆ ತೆರಳಿ ಬಾಗಿನ ಅರ್ಪಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರ ಡಿ.ಬಸವರಾಜ್, ಮಹಾನಗರ ಪಾಲಿಕೆ ಸದಸ್ಯರುಗಳಾದ ದೇವರಮನಿ ಶಿವಕುಮಾರ್, ಜಿ.ಎಸ್.ಮಂಜುನಾಥ್, ಕೆ.ಚಮನ್‌ಸಾಬ್, ಪಾಮೇನಹಳ್ಳಿ ನಾಗರಾಜ್, ಅಬ್ದುಲ್ ಲತೀಫ್, ಜಾಕೀರ್ ಅಲಿ, ವಿನಾಯಕ ಪೈಲ್ವಾನ್, ಸೈಯದ್ ಚಾರ್ಲಿ, ಜಿ.ಡಿ.ಪ್ರಕಾಶ್, ಉದಯ್ ಕುಮಾರ್, ಶಫೀಕ್ ಪಂಡಿತ್, ಶ್ರೀಮತಿ ಆಶಾ ಉಮೇಶ್, ಶ್ರೀಮತಿ ಸುಧಾ ಇಟ್ಟಿಗುಡಿ, ಶ್ರೀಮತಿ ಶ್ವೇತ ಶ್ರೀನಿವಾಸ್, ಶ್ರೀಮತಿ ಸವಿತಾ ಹುಲ್ಮನಿ ಗಣೇಶ್, ಮುಖಂಡರುಗಳಾದ ಉಮಾಶಂಕರ್, ಇಟ್ಟಿಗುಡಿ ಮಂಜುನಾಥ್, ಹುಲ್ಮನಿ ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.
೧೦ಡಿಪಿಹೆಚ್೧