ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ: ಔರಾದ ನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಔರಾದ : ಮೇ.21:ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿರುವ ಹಿನ್ನೆಲೆಯಲ್ಲಿ ಔರಾದನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ,ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದ ಕಾರ್ಯಕರ್ತರು ಪಕ್ಷದ ಜೈ ಘೋಷಣೆಗಳನ್ನು ಕೂಗಿದರು, ಈ ಸಂದರ್ಭದಲ್ಲಿ ಯುವ ಮುಖಂಡ ಸುನೀಲಕುಮಾರ ದೇಶಮುಖ ಅವರು ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಬಡ ಜನರ ಆಶೋತ್ತರಗಳನ್ನು ಈಡೇರಿಸಲು ಬದ್ಧವಾಗಿದೆ, ಔರಾದ ತಾಲ್ಲುಕಿನಲ್ಲಿ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿರುವ ಶಾಸಕರಿಗೆ ಜನರು ತಕ್ಕ ಪಾಠ ಕಲಿಸಿದ್ದಾರೆ, ಕಾರ್ಯಕರ್ತರು ಎದೆಗುಂದದೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಕಟ್ಟುವ ಕೆಲಸ ಮಾಡೋಣ ಎಂದು ತಿಳಿಸಿದರು.

ಹಿರಿಯ ಕಾಂಗ್ರೆಸ್ ಮುಖಂಡರಾದ ಬಸವರಾಜ್ ದೇಶಮುಖ, ಶಿವರಾಜ ದೇಶಮುಖ, ರಾಮಣ್ಣ ವಡೆಯರ್, ಶರಣಪ್ಪ ಪಾಟೀಲ, ಡಾ ಫಯಾಜ್ ,ಬಾಬುರಾವ ತಾರೆ, ಸುಧಾಕರ ಕೊಳ್ಳುರ, ಡಾ.ಮಹೇಶ ಪುಲಾರಿ, ಅನಿಲ ನಿರ್ಮಳೆ, ವಿವೇಕ ನಿರ್ಮಳೆ, ಅಂಜಾರಡ್ಡಿ, ವೈಜಿನಾಥ ವಡಿಯಾರ, ಪ್ರದೀಪ ,ರಹಿಮ ಮೊಲಿಸಾಬ, ಶಾವನ ಗುರೂಜಿ, ಮುಂತಾದವರು ಉಪಸ್ಥಿತರಿದ್ದರು.