ಕಾಂಗ್ರೆಸ್ ಸರ್ಕಾರ ರಚನೆಗೆ ನಾವು ಸಿದ್ಧ

ತುಮಕೂರು.ಮೇ೧೧: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಲು ನಾವು ಮಾನಸಿಕವಾಗಿ ಸಿದ್ಧರಾಗಿದ್ದೇವೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ೨೦೧೩ ರಲ್ಲಿ ನಾನು ೧೨೦ ಸ್ಥಾನ ಬರುವ ಮುನ್ಸೂಚನೆ ಕೊಟ್ಟಿದೆ. ಆದರೆ ಕಾಂಗ್ರೆಸ್ ೧೨೨ ಸ್ಥಾನ ಗೆದ್ದು ಸರ್ಕಾರ ರಚನೆ ಮಾಡಿತ್ತು. ಈ ಬಾರಿಯ ಚುನಾವಣೆಯಲ್ಲಿ ೧೩೦ ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದ್ದೇನ ನನ್ನ ಲೆಕ್ಕಚಾರ ಸರಿ ಆಗಬಹುದು ಎಂದರು.
ಎಲ್ಲಾ ಕಾಲಕ್ಕೂ ಎಲ್ಲಾ ಸಮೀಕ್ಷೆಗಳು ನಿಜವಾಗುವುದಿಲ್ಲ. ಕೆಲವೊಮ್ಮೆ ಸರ್ವೆ ನಿಜವಾಗಿದೆ. ಕೆಲವೊಮ್ಮೆ ಸುಳ್ಳಾಗಿದೆ. ಆದರೂ ಮತದಾನೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್ ಮುಂದಿದೆ. ಕಾಂಗ್ರೆಸ್ ಪರ ಅಲೆ ಇರೋದು ಸಾಬೀತಾಗಿದೆ. ವರುಣದಲ್ಲಿ ಯಾವುದೇ ತೊಂದರೆ ಇಲ್ಲದೆ ಸಿದ್ದರಾಮಯ್ಯ ಅವರು ಗೆಲ್ತಾರೆ ಎಂದು ಹೇಳಿದ್ದಾರೆ.