ಕಾಂಗ್ರೆಸ್ ಸರ್ಕಾರ ರೈತರನ್ನ ದಿವಾಳಿ ಮಾಡಿದೆ

ಚಿಕ್ಕಬಳ್ಳಾಪುರ,ಸೆ.೭-ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರಿಗೆ ಕಿಸಾನ್ ಸಮ್ಮಾನ್ ಹಣ ನಿಲ್ಲಿಸಿದೆ ಲೋಡ್ ಶೆಡ್ಡಿಂಗ್ ಮೂಲಕ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ನಿಲ್ಲಿಸಿದೆ ಸರ್ಕಾರ ಅಧಿಕಾರಕ್ಕೆ ಬಂದಾಗಿಂದ್ಲು ರಾಜ್ಯದಲ್ಲಿ ೩೫ ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ರಾಜ್ಯದ ರೈತ ವಿರೋದಿ ದೋರಣೆ ಖಂಡಿಸಿ ಇದೆ ತಿಂಗಳ ೮ ರಂದು ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಬಿಜೆಪಿ ರೈತಮೋರ್ಚಾದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಚಿಕ್ಕಬಳ್ಳಾಪುರದಲ್ಲಿ ಕೂಡ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ರಾಜ್ ಶೇಖರ್ ತಿಳಿಸಿದರು.
ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಗ್ಯಾರಂಟಿಗಳ ಕೊಡುಗೆ ಭರದಲ್ಲಿ ರೈತರನ್ನ ದಿವಾಳಿ ಮಾಡಿದೆ ಕೇಂದ್ರ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆಯಡಿ ನೀಡುತಿದ್ದ ೪ ಸಾವಿರ ಸ್ಥಗಿತಗೊಳಿಸಿದೆ ವಿದ್ಯುತ್ ಲೋಡ್ ಶೆಡ್ಡಿಂಗ್ ನಿಂದ ರೈತರ ಬೆಳೆಗಳು ಒಣಗುತ್ತಿವೆ ನೀರಿಲ್ಲದೆ ಪರಿತಪಿಸುವಂತಾಗಿದೆ.ಮೂರು ತಿಂಗಳಿಂದ ಸುಮಾರು ೩೦-೪೦ ಜನ ರೈತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಈ ಬಗ್ಗೆ ಮಂತ್ರಿಗಳು ಬೇಜವಾಬ್ದಾರಿ ಹೇಳಿಕೆ ಕೊಟ್ಟು ಪರಿಹಾರಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತಿದ್ದಾರೆಂದು ಹೇಳಿ ರೈತರ ಆಕ್ರೋಶಕ್ಕೆ ಗುರಿಯಾಗಿದ್ದಾರೆ ಮೂರು ತಿಂಗಳ ಹಿಂದೆ ಅಧಿಕಾರಕ್ಕೆ ಬಂದ ಕಾಂಗ್ರೇಸ್ ಸರ್ಕಾರದ ವಿರುದ್ದ ಇದೆ ತಿಂಗಳ ೮ ರಂದು ಬಿಜೆಪಿ ರೈತ ಮೋರ್ಚಾದಿಂದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.
ಈ ವೇಳೆ ರಾಜ್ಯ ಕಾರ್ಯದರ್ಶಿ ಶಿವಪ್ರಕಾಶ್,ಕೆ ವಿ ನಾಗರಾಜ್,ನಗರ ಘಟಕದ ಅಧ್ಯಕ್ಷ ಅನು ಆನಂದ್,ಲೋಕೇಶ್ ಗೌಡ,ಪ್ರದೀಪ್ ಮದುಚಂದ್ರ ಇತರರು ಹಾಜರಿದ್ದರು.