ಕಾಂಗ್ರೆಸ್ ಸರ್ಕಾರ ಸಾಕಷುಚಿ ಅನುಕೂಲ ಮಾಡಿಕೊಟ್ಟಿದೆ: ಸಚಿವ ಕೆ.ವೆಂಕಟೇಶ್

filter: 0; fileterIntensity: 0.0; filterMask: 0; captureOrientation: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 7864320;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 47;

ಸಂಜೆವಾಣಿ ನ್ಯೂಸ್
ಬೆಟ್ಟದಪುರ: ಬಡವರ ಹಾಗೂ ಮಧ್ಯಮ ವರ್ಗದ ಜನರಿಗೆ ಕಾಂಗ್ರೆಸ್ ಸರ್ಕಾರ ಸಾಕಷ್ಟು ಅನುಕೂಲ ಮಾಡಿಕೊಟ್ಟಿದ್ದೆ ಎಂದು ಪಶು ಸಂಗೋಪನ ಹಾಗೂ ರೇಷ್ಮೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.
ಕಾಂಗ್ರೆಸ್ ಪಕ್ಷದಿಂದ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷವು ದೇಶದಲ್ಲಿ ಅಶಾಂತಿ ಸೃಷ್ಟಿ ಮಾಡುವ ಮೂಲಕ ಕೋಮುಗಲಭೆಗಳನ್ನು ಹೆಚ್ಚು ಮಾಡುತ್ತಿದ್ದೆ, ಹೊರತು ಬಡಜನರ ಅಭಿವೃದ್ಧಿ ಬಗ್ಗೆ ಯೋಚಿಸದ ವಿರೋಧಿ ಪಕ್ಷವಾಗಿದೆ ಎಂದರು.
ಅಭ್ಯರ್ಥಿ ಎಂ.ಲಕ್ಷ್ಮಣ್ ಮಾತನಾಡಿ ಈ ಹಿಂದೆ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನೀಡಿದಂತಹ ಐದು ಗ್ಯಾರಂಟಿ ಯೋಜನೆಗಳನ್ನು ಕೊಟ್ಟ ಮಾತಿನಂತೆ ನುಡಿದು ಜಾರಿ ಮಾಡಲಾಗಿದೆ. ಈಗ ಮತ್ತೆ ಜನರಿಗಾಗಿ ವಿಶೇಷ ಯೋಜನೆಗಳನ್ನು ರೂಪಿಸಿದ್ದು, ಮಹಿಳೆಯರು ಸೇರಿದಂತೆ ಪ್ರತಿಯೊಬ್ಬರು ಸ್ವಾವಲಂಬಿಯಾಗಿ ಬದುಕಲು ಅವಕಾಶವಿದೆ. ಪಿರಿಯಾಪಟ್ಟಣದಲ್ಲಿ ಪ್ರಮುಖವಾಗಿ ಇರುವಂತಹ ತಂಬಾಕು ಸಮಸ್ಯೆಯನ್ನು ನಾನು ಈ ಚುನಾವಣೆಯಲ್ಲಿ ಗೆಲುವಿನ ಬಳಿಕ, ಸಂಸತ್ತಿನಲ್ಲಿ ಚರ್ಚಿಸಿ ಅದನ್ನು ಪರಿಹರಿಸುವುದಕ್ಕಾಗಿ ಶ್ರಮಿಸುತ್ತೇನೆ. ಪ್ರತಿಯೊಬ್ಬರು ಮತ ನೀಡುವ ಮೂಲಕ ಕಾಂಗ್ರೆಸ್ ಬೆಂಬಲಿಸಿ ಎಂದರು.
ಆಶ್ರಯ ಸಮಿತಿ ಅಧ್ಯಕ್ಷ ನಿತೀನ್ ವೆಂಕಟೇಶ್, ಮೈಸೂರು ಜಿಲ್ಲಾ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಡಾ.ಬಿ.ಜೆ ವಿಜಯಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಟಿ ಸ್ವಾಮಿ, ರಹಮತ್ ಜಾನ್ ಬಾಬು ಸೇರಿದಂತೆ ಗ್ರಾಮದ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಇದ್ದರು.