
ವಿಜಯಪುರ:ಜು.13: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್ ಎಸ್ ಪಾಟೀಲ ಕೂಚಬಾಳ್ ಕಿಡಿಕಾರಿದರು.
ವಿಜಯಪುರ ನಗರದಲ್ಲಿ ಗುರುವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಕೈಯಲ್ಲಿ ಯೋಜನೆ ನೀಡಿ ಮತ್ತೊಂದು ಕಡೆಗೆ ಕಸಿದುಕೊಳ್ಳುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ವಿವಿಧ ಕಡೆಗೆ ಹತ್ಯೆಗಳು ಆಗುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲದಂತೆ ಆಗಿದೆ. ಅದಕ್ಕಾಗಿ ಜೈನ ಮುನಿಗಳ ಹತ್ಯೆಯನ್ನು ಸಿಬಿಐ ತನಿಖೆ ನೀಡಬೇಕು. ಇನ್ನೂ ರಾಜ್ಯಾದ್ಯಂತ ವಿವಿಧ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದ್ದು, ಇದರಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದರು. ಕಾಂಗ್ರೆಸ್ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿದೆ, ಇದು ಖಂಡನೀಯ ಎಂದು ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಸಂಜಯ ಪಾಟೀಲ ಕನಮಡಿ ಹೇಳಿದರು. ಕಾಂಗ್ರೆಸ್ ಸರ್ಕಾರ ಎಪಿಎಂಸಿ ಕಾನೂನು ರದ್ದು ಮಾಡಿದೆ. ಇದರಿಂದ ರೈತರು ಬೆಳೆದಂತ ಬೆಳೆಯನ್ನು ಬೇರೆಡೆಗೆ ಮಾರಾಟಕ್ಕೆ ಕಡಿವಾಣ ಹಾಕಿದಂತೆ ಆಗಿದೆ ಎಂದು ಕಿಡಿಕಾರಿದರು. ಕಾಂಗ್ರೆಸ್ ಸರ್ಕಾರ 8 ಕ್ಕೂ ಹೆಚ್ಚು ಕಾಯ್ದೆಗಳನ್ನು ರದ್ದು ಮಾಡಿದೆ. ಇದರ ಹಿಂದೆ ದೊಡ್ಡ ಷ್ಯಡಂತ್ರ ಇದೆ. ಅದಕ್ಕಾಗಿ ತಕ್ಷಣವೇ ರದ್ದು ಮಾಡಿರುವ ಕಾಯ್ದೆಯನ್ನು ಜಾರಿಗೆ ಮಾಡಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಮುಖಂಡ ಚಂದ್ರಶೇಖರ್ ಕೌಟಿಗಿ ಕಾಸುಗೌಡ ಬಿರಾದಾರ, ಮಹಾನಗರ ಪಾಲಿಕೆ ಸದಸ್ಯ ಶಿವರುದ್ರಪ್ಪ ಬಾಗಲಕೋಟ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ್ ಬಿರಾದಾರ, ಜಿಲ್ಲಾ ಮಾಧ್ಯಮ ಪ್ರಮುಖ ವಿಜಯ ಜೋಶಿ ಉಪಸ್ಥಿತರಿದ್ದರು