
ಚಿತ್ರದುರ್ಗ, ಮಾ.15: ಜಿಲ್ಲೆಯ ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಕಾಂಗ್ರೇಸ್ ಅಲ್ಪಸಂಖ್ಯಾತ ಸೆಲ್ ನ ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಮೋಹಿದ್ದಿನ್ (ಚೋಟು) ಒತ್ತಾಯಿಸಿದ್ದಾರೆ.ಚಿತ್ರದುರ್ಗದ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಮುಸ್ಲಿಂ ಸಮುದಾಯದವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದೇವೆ. ಎಲ್ಲಿ ಮುಸ್ಲಿಂ ಮತಗಳು ನಿರ್ಣಾಯಕವಾಗಿರುವಂತಹ ಕ್ಷೇತ್ರಗಳಲ್ಲಿ ಟಿಕೆಟ್ ನೀಡಬೇಕು. ಅದರಲ್ಲಿ ಚಿತ್ರದುರ್ಗ ಕ್ಷೇತ್ರದಲ್ಲೂ ಸಹ ಮುಸ್ಲಿಂ ಸಮುದಾಯದ ಮತಗಳು ನಿರ್ಣಾಯಕವಾಗಿದ್ದು, ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷದಿಂದ ಟಿಕೆಟ್ ನೀಡಬೇಕು ಎಂದರು.ಕಾಂಗ್ರೇಸ್ ಪಕ್ಷದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡಿದಲ್ಲಿ, ಸಾಮಾಜಿಕ ನ್ಯಾಯ ನೀಡಿದಂತಾಗಲಿದೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಆರ್.ಕೆ ಸರ್ದಾರ್, ಎಂ.ಕೆ ತಾಜ್ ಪೀರ್ ಹಾಗೂ ಅನ್ವರ್ ಭಾಷರವರು ಆಕಾಂಕ್ಷಿಗಳಿದ್ದು, ಅಲ್ಪ ಸಂಖ್ಯಾತರಿಗೆ ಟಿಕೆಟ್ ನೀಡಬೇಕೆಂದು ಹೈಕಮಾಂಡ್ ಗೆ ಒತ್ತಾಯ ಮಾಡಿದ್ದೇವೆ ಎಂದು ಹೇಳಿದರು.ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಮುಸ್ಲಿಂರಿಗೆ ಟಿಕೆಟ್ ನೀಡುವ ಭರವಸೆಯಿದ್ದು, ಟಿಕೆಟ್ ನೀಡದೇ ಇದ್ದರೆ ಮುಂದಿನ ನಡವಳಿಯ ಬಗ್ಗೆ ಮುಸ್ಲಿಂ ಸಮುದಾಯದ ಮುಖಂಡರು ಸೇರಿ ಚರ್ಚೆ ಮಾಡಲಿದ್ದೇವೆ ಎಂದರು.ಜಿಲ್ಲಾ ಕಾಂಗ್ರೇಸ್ ಉಪಾಧ್ಯಕ್ಷ ಅರ್ಷಿದ ಬಾನು, ಸೈಯದ್ ನಿಸಾರ್ ಅಹ್ಮದ್, ಅಬ್ದುಲ್ ರೆಹಮಾನ್, ನಜ್ಮಾತಾಜ್, ಕಮ್ರಾನ್, ಸಾಧಿಕ್ ಮಹ್ಮದ್ ಉಮರ್ ಸೇರಿದಂತೆ ಇತರರು ಹಾಜರಿದ್ದರು.