ಕಾಂಗ್ರೇಸ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ : ಶಾಸಕ ಪಾಟೀಲ್

ಹುಮನಾಬಾದ:ಮಾ.14: ರಾಜ್ಯದಲ್ಲಿ ಕಾಂಗ್ರೇಸ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತವಾಗಿದೆ ಎಂದು ಶಾಸಕ ರಾಜಶೇಖರ್ ಪಾಟೀಲ್ ಹೇಳಿದ್ದರು ತಾಲೂಕಿನ ಕುಮಾರ್ ಚಿಂಚೋಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸಿ ಮಾತನಾಡುತ್ತ ತಿಳಿಸಿದರು. ಬಿಜೆಪಿಯ ಸರ್ಕಾರದಿಂದ ಜನ ಬೇಸತ್ತಿದ್ದಾರೆ ಈಗ ಸರ್ಕಾರದಲ್ಲಿ ಭ್ರಷ್ಟಾಚಾರ ತಂಡವಾಡುತ್ತಿದೆ. ಮತದಾರರ ವಲವು ಕಾಂಗ್ರೆಸ್ ಪಕ್ಷದ ಕಡೆ ಕಂಡುಬರುತ್ತದೆ ಕಾಂಗ್ರೆಸ್ ಸರ್ಕಾರ ಬರುವುದು ಗ್ಯಾರಂಟಿಯಾಗಿದೆ ಸರ್ಕಾರ ಅಧಿಕಾರಕ್ಕೆ ಬಂದರೆ 10 ಕೆಜಿ ಉಚಿತ ಅಕ್ಕಿ 200 ಯೂನಿಟ್ ವಿದ್ಯುತ್ ಉಚಿತ ಗೃಹಲಕ್ಷ್ಮಿ ಯೋಜನೆಯಲ್ಲಿ ಪ್ರತಿ ಮನೆಗೆ 2000 ನೀಡಲಾಗುವುದು ಎಂದು ಶಾಸಕ ರಾಜಶೇಖರ್ ಪಾಟೀಲ್ ಗ್ಯಾರಂಟಿ ಕಾರ್ಡ್ ವಿತರಿಸಿ ಮಾತನಾಡುತ್ತ ತಿಳಿಸಿದರು. ಕ್ಷೇತ್ರ ಪುನರ್ ವಿಂಗಡನೆ ಆದಮೇಲೆ ಕುಮಾರ್ ಚಿಂಚೋಳಿ. ಹಳ್ಳಿಖೇಡ ಬಿ. ಘಾಟಬೋರಳ. ಗ್ರಾಮಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದೇನೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿದರು ಗ್ರಾಮಕ್ಕೆ ಮಾಡಬೇಕಾದ ಕೆಲಸ ಕಾರ್ಯಗಳ ಬಗ್ಗೆ ವಿಚಾರಿಸಿದರು. ದುಬಲಗುಂಡಿ ಜಿಲ್ಲಾ ಪಂಚಾಯತ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಧುಮ್ಮನಸೂರ ಚಿನಕೇರ. ಸೇಡೋಳಾ. ಸುಲ್ತಾನಬಾದ. ಮುಗನೂರ.ಹಾಗೂ ನಮದಾಪೂರ ಗ್ರಾಮಕ್ಕೆ ಭೇಟಿ ನೀಡಿ ಕಾಂಗ್ರೇಸ್ ಗ್ಯಾರಂಟಿ ಕಾರ್ಡ ವಿತರಿಸಿದರು. ವಿಧಾನ ಪರಿಷತ್ ಸದಸ್ಯರಾದ ಭೀಮರಾವ ಪಾಟೀಲ. ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಲಕ್ಷ್ಮಣ ಬುಳ್ಳಾ ಅಪ್ಸರ ಮಿಯಾ, ಕೇಶವ ಮಹಾರಾಜ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.