ಕಾಂತರಾಜ್ ವರದಿ ಬಿಡುಗಡೆಗೆ ಆಗ್ರಹ

ರಾಯಚೂರು,ಡಿ.೨೦ – ಸರ್ಕಾರ ಕಾಂತರಾಜ್ ವರದಿಯ ಜಾತಿಗಣತಿಯನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ರಾಜ್ಯಾಧ್ಯಕ್ಷ ಬಿ.ಎಸ್. ಸೋಮಶೇಖರ ಆಗ್ರಹಿಸಿದರು.
ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ನೇಕಾರ ಸಮುದಾಯ ರಾಜ್ಯದಲ್ಲಿ ಸುಮಾರು ೬೦ ಲಕ್ಷ ಜನಸಂಖ್ಯೆಯಲ್ಲಿ ಇದ್ದೇವೆ. ಸಮುದಾಯ ರಾಜಕೀಯ, ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದಿದೆ. ಈ ನಿಟ್ಟಿನಲ್ಲಿ ಕೂಡಲೇ ಕಾಂತರಾಜ ವರದಿಯ ಜಾತಿಗಣತಿಯನ್ನು ಬಿಡುಗಡೆಗೊಳಿಸಿ ನೇಕಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ಆಗ್ರಹಿಸಿ ಫೆಬ್ರವರಿಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಆದ್ದರಿಂದ ಸಮಾಜದ ಮುಖಂಡರು ಭಾಗವಹಿಸಿ ಯಶಸ್ವಿಗೊಳಿಸಬೇಕು ಮನವಿ ಮಾಡಿದರು.
ಈ ಸಂದರ್ಭದಲ್ಲಿ ವೆಂಕಟೇಶ, ನವೀನ್ ಚಿಲ್ಲಾ, ಕೋಟಪ್ಪ, ಹೇಮಲತಾ, ಗೋವಿಂದ, ವಿನೋದಕುಮಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.