`ಕಾಂತಾರ’ ಮಂತ್ರ ಮುಗ್ದ ಫಸ್ಟ್ ಲುಕ್ ಬಿಡುಗಡೆ

ಕಳೆದ ವರ್ಷ ತೆರೆಗೆ ಬಂದು ಜಾಗತಿಕ ಮನ್ನಣೆ ಪಡೆದಿದ್ದ “ಕಾಂತಾರ” ಚಿತ್ರದ ಅದ್ಯಾಯ 1 ರ ಚಿತ್ರದ ಮುಹೂರ್ತ ಕುಂದಾಪುರದ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ನಡೆಯಿತು.

ಇದೇ ವೇಳೆದ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು ನಟ,ನಿರ್ದೇಶಕ ರಿಷಬ್ ಶೆಟ್ಟಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಮತ್ತೊಮ್ಮೆ ಜಾಗತಿಕ ಗಮನ ಸೆಳೆಯುವ ಭರವಸೆ ಮೂಡಿಸುಚ ಮೂಲಕ ಮಂತ್ರ ಮುಗ್ದಗೊಳಿಸಿದೆ.

ಚಿತ್ರದ ಮುಹೂರ್ತ ಸಮಾರಂಭದಲ್ಲಿ ನಿರ್ಮಾಪಕ ವಿಜಯ್ ಕಿರಂಗದೂರು, ರಿಷಬ್ ಶೆಟ್ಟಿ ಸೇರಿದಂತೆ ಚಿತ್ತತಂಡದ ಅನೇಕರು ಈ ಕ್ಷಣಕ್ಕೆ ಸಾಕ್ಷಿಯಾಯಿತು.

‘ಕಾಂತಾರ’ ಜಗತ್ತನ್ನು ಪರಿಚಯಿಸುವ ಈ ಟೀಸರ್ ನಲ್ಲಿ ರಿಷಭ್ ಶೆಟ್ಟಿ ಅವರ ಪಾತ್ರ ಮತ್ತು ವೇಷ ಗಮನ ಸೆಳೆಯುತ್ತದೆ. ಮೊದಲ ಭಾಗದ ಆ ಆರ್ಭಟ ಇಲ್ಲೂ ಮರುಕಳಿಸಿದ್ದು, ಈ ಮೂಲಕ ಹೊಸದೊಂದು ದಂತಕಥೆಯ ಸೃಷ್ಟಿಗೆ ಮುನ್ನುಡಿ ಬರೆದಿದೆ.  ರಿಷಭ್ ಶೆಟ್ಟಿ ಪಾತ್ರ ವೀಕ್ಷಹೊಸದೊಂದು ಕೌತುಕವನ್ನು ಹುಟ್ಟುಹಾಕಿದೆ.

ಮೊದಲ ಭಾಗ ಕನ್ನಡದಲ್ಲಿ ಬಿಡುಗಡೆಯಾಗಿ ಯಶಸ್ಸು ಕಂಡು ಪರಭಾಷೆಯಲ್ಲಿ ಸದ್ದು ಮಾಡಿತ್ತು. ಈಗ ಏಳು ಭಾಷೆಯಲ್ಲಿ ಚಿತ್ರ ಮೂಡಿಬರುತ್ತಿದೆ. ನಿರ್ಮಾಪಕ ವಿಜಯ್ ಕಿರಗಂದೂರ್ ಅವರ ಅಣ್ಣ ಮಂಜುನಾಥ್  ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ರಿಷಭ್ ಶೆಟ್ಟಿ ಪುತ್ರಿ ರಾಧ್ಯ ಕ್ಯಾಮೆರಾ ಚಾಲನೆ ಮಾಡಿದರು

ಡಿಸೆಂಬರ್ ನಲ್ಲಿ ಚಿತ್ರೀಕರಣ

‘ಕಾಂತಾರ’ ಚಿತ್ರ ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಬಂಧ, ಜನಪದ ಅಂಶಗಳನ್ನು ಬೆರೆಸಿ ಹೇಳಿದ ರೀತಿ ಪ್ರೇಕ್ಷಕರನ್ನು ಆಕರ್ಷಿಸಿತ್ತುಕಾಂತಾರ – ಅಧ್ಯಾಯ 1 ರಲ್ಲೂ ಮುಂದುವರೆದಿದ್ದು, ದೈವತ್ವದ ಹೊಸ ವ್ಯಾಖ್ಯಾನ ಈ ಚಿತ್ರದಲ್ಲಾಗಲಿದೆ.

ಡಿಸೆಂಬರ್ ಅಂತ್ಯಕ್ಕೆ ಚಿತ್ರೀಕರಣ ಪ್ರಾರಂಭವಾಗಲಿದ್ದು, ತಾರಾಬಳಗದ ಬಗ್ಗೆ ಸದ್ಯದಲ್ಲೇ ಹೆಚ್ಚಿನ ಮಾಹಿತಿ ಹೊರಬೀಳಲಿದೆ. ಮೊದಲ ಭಾಗದಲ್ಲಿ ಇದ್ದ ಬಹುತೇಕ ಕಲಾವಿದರು ಇದ್ದು ಜೊತೆಗೆ ಹೊಸ ಕಲಾವಿದರೂ ಇದ್ದಾರೆ.