ಕಾಂಪೌಂಡ್ ಕುಸಿದು ಇಬ್ಬರು ಸಾವು

ಬೆಂಗಳೂರು, ಜು.13- ಶಿಥಿಲಾವಸ್ಥೆಯ ಕಾಂಪೌಂಡ್ ಗೋಡೆ ಕುಸಿದು ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬ್ಯಾಟರಾಯನಪುರ
ದೀಪಾಂಜಲಿ ನಗರದ ಜಂಕ್ಷನ್ ಬಳಿ ಸಂಭವಿಸಿದೆ.
ವಾಲ್ಮೀಕಿ ನಗರ ನಿವಾಸಿಗಳಾದ ರಾಜಮಣಿ (35), ಬಾಲು (30) ಮೃತಪಟ್ಟವರು.
ನಗರದಲ್ಲಿ ಕಳೆದ ಎರಡು ವಾರಗಳಿಂದ ಮಳೆಯಾಗುತ್ತಿದೆ. ಮಳೆಗೆ ನೆನೆದು ಶಿಥಿಲಾವಸ್ಥೆಯಲ್ಲಿದ್ದ ಕಾಂಪೌಂಡ್ ಹಠಾತ್ ಕುಸಿದು ಬಿದ್ದಿದೆ. ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.