ಕಾಗೇರಿ, ಹೊರಟ್ಟಿಗೆ ಕೊರೊನಾ ದೃಢ

ಬೆಂಗಳೂರು, ಏ. ೨೮- ರಾಜ್ಯ ವಿಧಾನಸಭಾಧ್ಯಕ್ಷ ವಿಶ್ವೇಶ್ವರಹೆಗಡೆ ಕಾಗೇರಿ, ವಿಧಾನಪರಿಷತ್‌ನ ಸಭಾಪತಿ ಬಸವರಾಜಹೊರಟ್ಟಿ ಇಬ್ಬರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
ವಿಧಾನಸಭಾಧ್ಯಕ್ಷ ವಿಶ್ವೇಶ್ವರಹೆಗಡೆ ಕಾಗೇರಿ ಅವರು ಸೋಂಕಿನ ಲಕ್ಷಣವಿಲ್ಲದ ಕಾರಣ ಮನೆಯಲ್ಲೇ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಧಾನಪರಿಷತ್‌ನ ಸಭಾಪತಿ ಬಸವರಾಜಹೊರಟ್ಟಿ ಅವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಣ್ಯರ ಹಾರೈಕೆ
ವಿಧಾನಸಭಾಧ್ಯಕ್ಷ ವಿಶ್ವೇಶ್ವರಹೆಗಡೆ ಕಾಗೇರಿ ಮತ್ತು ವಿಧಾನಪರಿಷತ್ ಸಭಾಪತಿ ಬಸವರಾಜಹೊರಟ್ಟಿ ಅವರು ಕೋವಿಡ್ ಸೋಂಕಿಗೆ ತುತ್ತಾಗಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಶೀಘ್ರ ಸೋಂಕಿನಿಂದ ಗುಣಮುಖರಾಗಿ ಎಂದು ಹಾರೈಸಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಈಶ್ವರಪ್ಪ, ಬಸವರಾಜಬೊಮ್ಮಾಯಿ ಸೇರಿದಂತೆ ಹಲವು ರಾಜಕೀಯ ನಾಯಕರು ವಿಶೇಶ್ವರಹೆಗಡೆ ಕಾಗೇರಿ ಹಾಗೂ ಬಸವರಾಜಹೊರಟ್ಟಿ ಅವರು ಕೊರನಾ ಸೋಂಕಿನಿಂದ ಮುಕ್ತರಾಗಿ ಬರಲಿ ಎಂದು ಪ್ರಾರ್ಥಿಸಿದ್ದಾರೆ.