ಕಾಡಜ್ಜಿಗೆ ಬಸ್ ವ್ಯವಸ್ಥೆ: ಗ್ರಾಮಸ್ಥರ ಹರ್ಷ

ದಾವಣಗೆರೆ.ನ.೧೭: ತಾಲ್ಲೂಕಿನ ಕಾಡಜ್ಜಿ ಗ್ರಾಮಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ವ್ಯವಸ್ಥೆ ಮಾಡಿದ್ದು ಗ್ರಾಮಸ್ಥರು ಹರ್ಷ ವ್ಯಕ್ತ ಪಡಿಸಿದ್ದಾರೆ.
ಈ ಹಿಂದೆ ಗ್ರಾಮಕ್ಕೆ ಸಾರಿಗೆ ಸಂಸ್ಥೆ ಬಸ್ ಬರುತ್ತಿದ್ದು ಕೆಲ ವರ್ಷಗಳಿಂದ ಬರುತ್ತಿರಲಿಲ್ಲ. ಇದರಿಂದಾಗಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳಿಗೆ ಬಹಳಷ್ಟು ತೊಂದರೆಯಾಗಿತ್ತು.
ಗ್ರಾಮಸ್ಥರು ರಾಜ್ಯ ಸಾರಿಗೆ ಸಚಿವ ಶ್ರೀರಾಮುಲು ಅವರಿಗೆ ಮೇಲ್ ಮಾಡಿ ತಮ್ಮೂರಲ್ಲಿರುವ ವಿವಿಧ ಸೌಲಭ್ಯಗಳು, ಸಮಯಕ್ಕೆ ಸರಿಯಾಗಿ ಬಸ್ ಇಲ್ಲದ್ದರಿಂದ ಆಗುತ್ತಿರುವ ತೊಂದರೆ ಬಗ್ಗೆ ಗಮನಕ್ಕೆ ತಂದಿದ್ದಾರೆ. ಬಸ್ ಇಲ್ಲದ್ದರಿಂದ ಆಗುತ್ತಿರುವ ಅನಾನುಕೂಲತೆ ಬಗ್ಗೆ ಶಾಸಕ ಎಸ್.ಎ.ರವೀಂದ್ರನಾಥ ಅವರ ಗಮನಕ್ಕೂ ತರಲಾಗಿತ್ತು. ತಕ್ಷಣವೇ ಇತ್ತ ಗಮನಹರಿಸಿದ ಸಾರಿಗೆ ಸಚಿವರು ಮತ್ತು ಶಾಸಕರು ಇಲಾಖೆ ಅಧಿಕಾರಿಗಳಿಗೆ ಸೂಚಿಸಿ ಕಾಡಜ್ಜಿ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸಿದ್ದಾರೆ. ಇದರಿಂದಾಗಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ.
ತಮ್ಮ ಊರಿಗೆ ಬಸ್ ದಿನಕ್ಕೆ ೬-೭ ಬಾರಿ ಬಸ್ ಬರುವುದರಿಂದ ಗ್ರಾಮಸ್ಥರು ಸಂತಸಗೊಂಡಿದ್ದು ಸಾರಿಗೆ ಸಚಿವರು ಮತ್ತು ಶಾಸಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.