ಕಾಡಾ ಅಧ್ಯಕ್ಷರಾಗಿ ಎಚ್.ಎಂ.ತಿಪ್ಪೇರುದ್ರಸ್ವಾಮಿ ಅಧಿಕಾರ ಸ್ವೀಕಾರ

ಗಂಗಾವತಿ ಜ.3: ನನ್ನ ಅಧಿಕಾರ ಅವಧಿಯಲ್ಲಿ ರೈತರಿಗೆ ನ್ಯಾಯ ದೊರಕಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತುಂಗಭದ್ರಾ ಅಚ್ಚುಕಟ್ಟು ಪ್ರಾಧಿಕಾರ ನಿಗಮ (ಕಾಡಾ) ಅಧ್ಯಕ್ಷ ಹೆಚ್.ಎಂ. ತಿಪ್ಪೇರುದ್ರಸ್ವಾಮಿ ಹೇಳಿದರು.
ನಿಗಮದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿ ಭಾನುವಾರ ಮಾತನಾಡಿದರು.
ನಂತರ ತುಂಗಭದ್ರಾ ಅಣೆಕಟ್ಟಿಗೆ ಭೇಟಿ ನೀಡಿ ಅಲ್ಲಿನ ವಾಸ್ತವ ಸ್ಥಿತಿಗತಿಗಳ ಕುರಿತು ಮಾಹಿತಿ ಪಡೆದರು

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎಚ್.ಎಂ. ಸಿದ್ದರಾಮ ಸ್ವಾಮಿ, ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷ ಜಾರ್ಜ್ಚನ್ನಪ್ಪ ಮಳಿಗಿ, ಹೆಚ್.ಎಂ. ಸಿದ್ದರಾಮ ಸ್ವಾಮಿ ಉಪಸ್ಥಿತರಿದ್ದರು.