ಕಾಡಾ ಅಧ್ಯಕ್ಷರಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ನೇಮಕ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಮಾ.01- ಕಾವೇರಿ ಜಲನಯನ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ(ಕಾಡಾ) ಅಧ್ಯಕ್ಷರಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು ಹಾಗೂ ಎರಡು ಅವಧಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಪಿ. ಮರಿಸ್ವಾಮಿ ಮಾಜಿ ಸಂಸದ ದಿ. ಆರ್. ಧ್ರುವನಾರಾಯಣ ಅವರ ಅಪ್ತ ಬಳಗದಲ್ಲಿದ್ದರು. ದಿ. ಎಚ್.ಎಸ್. ಮಹದೇವಪ್ರಸಾದ್ ಅವರ ಅಪ್ತರಾಗಿದ್ದು, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಕ್ರಿಯ ಹಾಗೂ ನಿಷ್ಟಾವಂತ ಕಾರ್ಯಕರ್ತರಾಗಿ ಪಕ್ಷದ ಸಂಘಟನೆ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ತಮ್ಮದೇ ಅದ ಸೇವೆ ಸಲ್ಲಿಸುತ್ತಿದ್ದು, ಅವರ ಸೇವೆಯನ್ನು ಗುರುತಿಸಿ ರಾಜ್ಯ ವರಿಷ್ಠರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾಡಾ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಮೂಲಕ ಜಿಲ್ಲೆಗೊಂದು ಅವಕಾಶವನ್ನು ನೀಡಿದ್ದಾರೆ.
ರೈತರ ಅಭಿವೃದ್ದಿಗೆ ಹೆಚ್ಚು ಅನುದಾನ ಬಳಕೆ : ನೂತನ ಕಾಡಾ ಅಧ್ಯಕ್ಷರಾಗಿ ನೇಮಕವಾಗಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ಮಾತನಾಡಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್, ಜಿಲ್ಲೆಯ ಹಿರಿಯ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, .ಎಸ್. ಗಣೇಶ ಪ್ರಸಾದ್, ದರ್ಶನ್ ಧ್ರುವನಾರಾಯಣ್, ಮಾಜಿ ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಜಿ.ಎನ್. ನಂಜುಂಡಸ್ವಾಮಿ, ಹಾಗೂ ಎಲ್ಲಾ ಮುಖಂಡರಿಗೆ ಅಭಾರಿಯಾಗಿದ್ದೇನೆ. ವರಿಷ್ಟರು ಪಕ್ಷದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಕಾಡಾ ಅದ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಮುಂದಿನ ದಿನಗಳಲ್ಲಿ ವರಿಷ್ಟರು ನೀಡಿರುವ ಜವಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವ ಜೊತೆಗೆ ಕಾವೇರಿ ಅಚ್ಚುಕಟ್ಟು ವ್ಯಾಪ್ತಿಯಲ್ಲಿರುವ ರೈತರ ಅಭಿವೃದ್ದಿಗಾಗಿ ಹೆಚ್ಚಿನ ಒತ್ತು ಹಾಗೂ ಜಿಲ್ಲೆಯಲ್ಲಿರುವ ಕೆರೆಗಳ ಅಭಿವೃದ್ದಿ ಮತ್ತು ನಾಲೆ ಹಾಗು ಸಂಪರ್ಕ ರಸ್ತೆಗಳ ಅಭಿವೃದ್ದಿಪಡಿಸಿ, ಸರ್ಕಾರ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಲು ಶ್ರಮಿಸುವುದಾಗಿ ತಿಳಿಸಿದರು.
ಮಾ. 4 ರಂದು ಮೈಸೂರಿನ ಕಾಡಾ ಕಚೇರಿಯಲ್ಲಿ ಅಧಿಕಾರ ಸ್ವೀಕಾರ : ನೂತನ ಕಾಡಾ ಅಧ್ಯಕ್ಷರಾಗಿ ಮಾ. 4 ರ ಸೋಮವಾರ ಮೈಸೂರಿನ ಕಾಡಾ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸುವುದಾಗಿ ತಿಳಿಸಿದರು.
ಮತ್ತೆ ಚಾ.ನಗರ ಜಿಲ್ಲೆಗೆ ಕಾಡಾ ಅಧ್ಯಕ್ಷ ಗಿರಿ; ಚಾಮರಾಜನಗರ ಜಿಲ್ಲೆಗೆ ಮೂರನೇ ಬಾರಿ ಕಾಡಾ ಅಧ್ಯಕ್ಷ ಸ್ಥಾನ ಲಭಿಸಿದೆ. 2017 ರ ಕಾಂಗ್ರೆಸ್ ಸರ್ಕಾರದ ಅವದಿಯಲ್ಲಿ ಗುಂಡ್ಲುಪೇಟೆ ಕ್ಷೇತ್ರದ ಹಂಗಳ ನಂಜಪ್ಪ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ತದನಂತರ ಬಿಜೆಪಿ ಸರ್ಕಾರದ ಅವಧಿಯಲ್ಲಿ ಚಾಮರಾಜನಗರ ಕ್ಷೇತ್ರದ ಜಿ.ನಿಜಗುಣರಾಜು ಅಧ್ಯಕ್ಷರಾಗಿದ್ದರು. ಈಗ ಕಾಂಗ್ರೆಸ್ ಸರ್ಕಾರದ ಅಧಿಕಾರವಾಧಿಯಲ್ಲಿ ಮತ್ತೇ ಚಾ.ನಗರ ಕ್ಷೇತ್ರಕ್ಕೆ ಅಧಿಕಾರ ಲಭಿಸಿದೆ. ಚಾ.ನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ನಂಜೇದೇವನಪುರ ಗ್ರಾಮದ ಲೇಟ್. ಪುಟ್ಟಮಾದಪ್ಪ ಅವರ ಮಗ ಹಾಗೂ ಹರವೆ ಕ್ಷೇತ್ರದ ಜಿ.ಪಂ.ಮಾಜಿ ಸದಸ್ಯ ಪಿ. ಮರಿಸ್ವಾಮಿ ಕಾಡಾ ಅಧ್ಯಕ್ಷರಾಗಿರುವುದು ಜಿಲ್ಲೆಗೆ ಮತ್ತೊಮ್ಮೆ ಅವಕಾಶ ದೊರೆತಿದೆ.