ಕಾಡಾ ಅಧ್ಯಕ್ಷ ಬಸನಗೌಡ ರಾಜೀನಾಮೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ.

ರಾಯಚೂರು,ನ.೭- ತುಂಗಭದ್ರಾ ಕಾಡಾ ಅಧ್ಯಕ್ಷ ಆರ್.ಬಸನಗೌಡ ತುರುವಿಹಾಳ ತಮ್ಮ ಸ್ಥಾನ ರಾಜೀನಾಮೆ ನೀಡಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಮಸ್ಕಿ ಉಪ ಚುನಾವಣೆ ಘೋಷಣೆಯಾಗುವ ಸಮಯದಲ್ಲಿ ಕಾಂಗ್ರೆಸ್ ಸೇರ್ಪಡೆ ಬಿಜೆಪಿ ವಲಯದಲ್ಲಿ ತಲ್ಲಣ ಮೂಡಿಸಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ 213 ಅಲ್ಪ ಮತಗಳಿಂದ ಸೋತಿದ್ದ ಅವರು ಉಪ ಚುನಾವಣೆಯಲ್ಲಿ ಪುನಃ ಅದೃಷ್ಟ ಪರೀಕ್ಷೆಗೆ ಸಜ್ಜಾಗಿದ್ದಾರೆ. ಆರ್.ಬಸನಗೌಡ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರ ಅವರ ಸಮ್ಮುಖದಲ್ಲಿ ಪಕ್ಷ ಸೇರಿದ್ದಾರೆ.
ಪ್ರತಾಪ್‌ಗೌಡ ಪಾಟೀಲ್‌ರಿಗೆ ಬಿಜೆಪಿ ಮಸ್ಕಿ ಉಪ ಚುನಾವಣೆ ಟಿಕೆಟ್ ಬಹುತೇಕ ಖಚಿತವಾದ ಹಿನ್ನೆಲೆಯಲ್ಲಿ ಆರ್.ಬಸನಗೌಡ ಮುಂದಿನ ರಾಜಕೀಯ ಭವಿಷ್ಯಕ್ಕಾಗಿ ಕಾಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.


ಬಸವನಗೌಡ ಅವರು ಪ್ರಬಲ ಪೈಪೋಟಿ ನೀಡುವ ಅಭ್ಯರ್ಥಿ ಎನ್ನು ಉದ್ದೇಶದಿಂದ ಕಾಂಗ್ರೆಸ್ ಅವರನ್ನು ಪಕ್ಷಕ್ಕೆ ಸೆಳೆದಿಯುವ ಮೂಲಕ ಉಪ ಚುನಾವಣೆ ಸಮರಕ್ಕೆ ಕಾಂಗ್ರೆಸ್ ವೇದಿಕೆ ಸಜ್ಜುಗೊಳಿಸಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ನಾಯಕ, ಮಾಜಿ ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸುರಾಜು, ಲಿಂಗಸೂಗೂರು ಶಾಸಕ ಡಿ.ಎಸ್.ಹೂಲಗೇರಿ, ಮಾಜಿ ಶಾಸಕ ಹಂಪನಗೌಡ ಬಾದರ್ಲಿ, ಅಮರೇಗೌಡ ಬಯ್ಯಾಪೂರು ಸೇರಿದಂತೆ ಇನ್ನಿತರೆ ಮುಖಂಡರು ಉಪಸ್ಥಿತರಿದ್ದಾರೆ.