ಕಾಡಾ ಅಧ್ಯಕ್ಷ ಸ್ಥಾನಕ್ಕೆ ಬಸನಗೌಡ ತುರ್ವಿಹಾಳ ರಾಜೀನಾಮೆ


ಬೆಂಗಳೂರು, ನ 7-ತುಂಗಾ ಭದ್ರಾ ಕಾಲುವೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ಬಸನಗೌಡ ತುರ್ವಿಹಾಳ ಇಂದು ರಾಜೀನಾಮೆ ನೀಡಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಕೇವಕ‌ 213 ಮತಗಳಿಂದ ಬಸನಗೌಡ ಸೋಲು ಅನುಭವಿಸಿದ್ದರು.
ಮುಂಬರುವ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಸಮರದಲ್ಲಿ ಬಿಜೆಪಿಯಿಂದ ಟಿಕೆಟ್‌ ತಪ್ಪುತ್ತದೆ ಎಂಬ ಸುಳಿವು ದೊರೆತಿರುವ ಹಿನ್ನೆಲೆಯಲ್ಲಿ ಬಿಜೆಪಿ ತೊರೆಯಲು ತೀರ್ಮಾನಿಸಿದ್ದಾರೆ. ಹೀಗಾಗಿ ಕಾಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಾಳೆ ತಮ್ಮ ಬೆಂಬಲಿಗರೊಂದಿಗೆ ಅಧಿಕೃತವಾಗಿ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ.