ಕಾನೂನು ಅರಿವು ಕಾರ್ಯಕ್ರಮ

ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ಲೋಕಾಯುಕ್ತ ಉಡುಪಿ ಮತ್ತು ಅಲೆವೂರು ಗ್ರಾ.ಪಂ. ಸಂಯುಕ್ತ ಆಶ್ರಯದಲ್ಲಿ ಸಾರ್ವಜನಿಕ ಕುಂದುಕೊರತೆಗಳ ಪರಿಹರಿಸುವಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಪಾತ್ರದ ಕುರಿತು ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ ಅಲೆವೂರು ಗುಡ್ಡೆಯಂಗಡಿ ಸಂಕಲ್ಪ ಸಭಾಭವನದಲ್ಲಿ ನಡೆಯಿತು. ಈ ವೇಳೆ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್, ಕರ್ನಾಟಕ ಲೋಕಾಯುಕ್ತ ಉಡುಪಿಯ ಪೊಲೀಸ್ ಉಪಾಧೀಕ್ಷಕ ಜಗದೀಶ್ ಎಂ., ಪೊಲೀಸ್ ನಿರೀಕ್ಷಕ ಜಯರಾಮ ಡಿ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.