ಕಾನೂನು ಕಾಲೇಜಿನಲ್ಲಿ ವಾರ್ಷಿಕ ದಿನಾಚರಣೆ

ಸಂಜೆವಾಣಿ ವಾರ್ತೆ

ದಾವಣಗೆರೆ.ಸೆ.10: ಈಚೆಗೆ ನಗರದ ಆರ್.ಎಲ್. ಕಾನೂನು ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ವಾರ್ಷಿಕ ದಿನಾಚರಣೆಯನ್ನು ಆಚರಿಸಲಾಯಿತು. ಸಮಾರಂಭವನ್ನು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಡಾ. ಸಿ. ಬಸವರಾಜು ಉದ್ಘಾಟಿಸಿದರು. ಬಾಪೂಜಿ ವಿದ್ಯಾಸಂಸ್ಥೆಯ ಡಾ. ಎಂ.ಜಿ. ಈಶ್ವರಪ್ಪ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಜಿ.ಎಸ್. ಯತೀಶ್ ವಹಿಸಿದ್ದರು. ಈ ವೇಳೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರುಗಳಾದ ಕೆ.ಎನ್. ಪ್ರದೀಪ್ ಸ್ವಾಗತಿಸಿದರೆ, ಟಿ. ವಿದ್ಯಾಧರ ವೇದವರ್ಮ ವಾರ್ಷಿಕ ವರದಿ ಮಂಡಿಸಿದರು. ಬಿ.ಪಿ. ಬಸವನಗೌಡ ವಂದಿಸಿದರು.