ಕಾನೂನು ಚೌಕಟ್ಟಿನಲ್ಲಿ ಸಾಮಾಜಿಕ ನ್ಯಾಯ ಒದಗಿಸಲು ಪ್ರಯತ್ನ

ಅಥಣಿ:ನ.13: ಬಡವರಿಗೆ, ನೋಂದವರಿಗೆ ಕಾನೂನು ಚೌಕಟ್ಟಿನಲ್ಲಿ ಸಾಮಾಜಿಕ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಯ ನೂತನ ತಾಲೂಕಾಧ್ಯಕ್ಷ ದಾವಲ ಮಕಾಂದಾರ ಹೇಳಿದರು.
ಅವರು ಅಥಣಿ ಪಟ್ಟಣದಲ್ಲಿ ಶುಕ್ರವಾರ ತಾಲೂಕ ಅಂಜುಮನ ಕಮಿಟಿ ಹಾಗೂ ಮಕಾನದರ ಬಂಧುಗಳು ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಇಂದಿನ ಸಾಮಾಜಿಕ ವ್ಯವಸ್ಥೆಯಲ್ಲಿ ಅನೇಕ ಸಂದರ್ಭಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ, ಮಕ್ಕಳ ಮೇಲೆ ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ಮತ್ತು ಅನೇಕ ಇಲಾಖೆಗಳಲ್ಲಿ ಭ್ರಷ್ಟಾಚಾರದ ಪ್ರಕರಣಗಳು ಹೆಚ್ಚಾಗುತ್ತೇವೆ. ಬಡ ಜನತೆಗೆ ಮತ್ತು ನೋಂದ ಜನರಿಗೆ ಕಾನೂನಿನ ಅರಿವು ಮೂಡಿಸುವುದರ ಜೊತೆಗೆ ಅವರಿಗೆ ಕಾನೂನು ಚೌಕಟ್ಟಿನಲ್ಲಿ ಸಾಮಾಜಿಕ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ತಮ್ಮೆಲ್ಲರ ಸಹಾಯ ಸಹಕಾರ ಶುಭ ಹಾರೈಕೆಗೆ ಚಿರಋಣಿಯಾಗಿದ್ದೇನೆ ಎಂದು ಹೇಳಿದರು.
ರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಯ ತಾಲೂಕ ಕಾರ್ಯದರ್ಶಿ ವಿಜಯ ಹುದ್ದಾರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ವೇಳೆ ಅಂಜುಮನ್ ಕಮಿಟಿಯ ಅಧ್ಯಕ್ಷ ಸೈಯದಅಮೀನ ಗದ್ಯಾಳ, ಸದಸ್ಯ ಅಬ್ದು???ಜೀಜ್ ಮುಲ್ಲಾ, ಸಲ್ಮಾನ್ ಮೌಲವಿ, ಮುಫ್ತಿ ಹಬೀಬ್ ಮುಲ್ಲಾ, ಗುಡುಸಾಬ ಜಮಾದಾರ, ರಿಯಾಜ್ ಮಕಾಂದಾರ, ಮೌಲಾನ ಮೋಹಸಿನ ಪಠಾಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.