ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಪ್ರವಾಸ

ಕಲಬುರಗಿ.ಜ.04:ರಾಜ್ಯದ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ.ಸಿ. ಮಧುಸ್ವಾಮಿ ಅವರು ಬೆಂಗಳೂರಿನಿಂದ ಸ್ಟಾರ್ ಏರ್ ವಿಮಾನದ ಮೂಲಕ ಮಂಗಳವಾರ ಜನವರಿ 5 ರಂದು ಬೆಳಿಗ್ಗೆ 9.45 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.
ನಂತರ ಸಚಿವರು ಅಂದು ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ತಾಲೂಕಿನ ಹತಗುಂದಾ ಗ್ರಾಮದ ಕೆರೆ ಬಳಿಯಲ್ಲಿ ಕಲಬುರಗಿ ದಕ್ಷಿಣ ಮತಕ್ಷೇತ್ರದ ಕೆರೆಗಳಿಗೆ ಕುಡಿಯುವ ನೀರು ಮತ್ತು ಅಂತರ್ಜಲ ಅಭಿವೃದ್ಧಿ ಸಲುವಾಗಿ ಬೆಣ್ಣೆತೋರಾ ಜಲಾಶಯದಿಂದ ಏತ ನೀರಾವರಿ ಮೂಲಕ ನೀರನ್ನು ತುಂಬಿಸುವ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಅಂದು ಮಧ್ಯಾಹ್ನ 1 ಗಂಟೆಗೆ ಅಫಜಲಪುರ ತಾಲೂಕಿನ ಘೋಳನೂರ-ಮೋಗನ ಇಟಗಾ ಗ್ರಾಮಗಳ ನಡುವೆ ಭೀಮಾನದಿಗೆ ಅಡ್ಡಲಾಗಿ ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣ ಕಾಮಗಾರಿಯ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸುವರು.
ಸಂಜೆ 4 ಗಂಟೆಗೆ ಅಫಜಲಪುರ ತಾಲೂಕಿನಲ್ಲಿ ಪ್ರವಾಹದಿಂದ ಹಾನಿಗೊಳಗಾದ ಬಿದನೂರ ಗ್ರಾಮದ ಹತ್ತಿರ ಸಣ್ಣ ನೀರಾವರಿ ಕೆರೆಯ ಪರಿವೀಕ್ಷಣೆ ಹಾಗೂ ಸಂಜೆ 5 ಗಂಟೆಗೆ ಕಲಬುರಗಿ ತಾಲೂಕಿನಲ್ಲಿ ಪ್ರವಾಹದಿಂದ ಹಾನಿಗೊಳಗಾದ ಹಾಗರಗುಂಡಗಿ ಗ್ರಾಮದ ಹತ್ತಿರದ ಸಣ್ಣ ನೀರಾವರಿ ಕೆರೆಯ ಪರಿವೀಕ್ಷಣೆ ಮಾಡುವರು. ನಂತರ ಸಚಿವರು ರಾತ್ರಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಬುಧವಾರ ಜನವರಿ 6 ರಂದು ಬೆಳಗಿನ 9 ಗಂಟೆಗೆ ಕಲಬುರಗಿಯಿಂದ ಬೀದರ ಜಿಲ್ಲೆಯ ಬಸವಕಲ್ಯಾಣಕ್ಕೆ ಪ್ರಯಾಣಿಸುವರು.