ಕಾನೂನು ಸೇವೆಗಳ ದಿನಾಚರಣೆ

ದಾವಣಗೆರೆ,ನ.10; ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಏರ್ಪಡಿಸಲಾದ ಕಾನೂನು ಸೇವೆಗಳ ದಿನಾಚರಣೆಯನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ನ್ಯಾಯಾಧೀಶರಾದ ರಾಜೇಶ್ವರಿ ಹೆಗಡೆ ಅವರು ಉದ್ಘಾಟಿಸಿದರು.  ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಡಿ.ಪಿ. ಬಸವರಾಜ್ ಅಧ್ಯಕ್ಷತೆ ವಹಿಸಿದ್ದರು. ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್ ನಾಯಕ್, ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಬಿ. ದಶರಥ, ಸಮಾರಂಭದಲ್ಲಿ ವಿವಿಧ ನ್ಯಾಯಾಧೀಶರುಗಳು ಮತ್ತು ವಕೀಲರ ಸಂಘದ ಪದಾಧಿಕಾರಿಗಳು ಪೆನಲ್ ವಕೀಲರು ಹಾಜರಿದ್ದರು.