
ಬಳ್ಳಾರಿ,ಮೇ 03: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಒಂದು ಪ್ರಧಾನ ಹಕ್ಕಾಗಿದ್ದು, ದೇಶದ ಪ್ರಗತಿಗೆ ಎಲ್ಲರೂ ತಮ್ಮ ಅಮೂಲ್ಯ ಮತದಾನದ ಹಕ್ಕು ಚಲಾಯಿಸಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ಹೇಳಿದರು.
ಚುನಾವಣೆ ಅಂಗವಾಗಿ “ಪ್ರಜಾಪ್ರಭುತ್ವ ನಮ್ಮಿಂದ, ಮತದಾನ ಹೆಮ್ಮೆಯಿಂದ” ಎಂಬ ಘೋಷ ವಾಕ್ಯದೊಂದಿಗೆ ಬುಧವಾರ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಅಭಿಯಾನ ಜಾಥಾಕ್ಕೆ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ದೇಶದ ಆರ್ಥಿಕ ಬಿಕ್ಕಟ್ಟನ್ನು ಸುಧಾರಿಸಲು ನಿಷ್ಠಾವಂತ, ಪ್ರಾಮಾಣಿಕ ನಾಯಕರನ್ನು ಆರಿಸಬೇಕು. ಈ ನಿಟ್ಟಿನಲ್ಲಿ ಮತದಾರರು ಯಾವುದೇ ಹಣ, ಉಡುಗೊರೆ ಆಮಿಷಗಳಿಗೆ ಒಳಗಾಗದೆ ತಮ್ಮ ಮತವನ್ನು ಚಲಾಯಿಸಬೇಕು. ಯಾರೂ ಮತದಾನ ತಪ್ಪಿಸಬಾರದು ಎಂದು ಪುಷ್ಪಾಂಜಲಿ ದೇವಿ ಅವರು ಹೇಳಿದರು.
ಮತದಾನ ಜಾಗೃತಿ ಅಭಿಯಾನದಲ್ಲಿ ಮತದಾನ ಕುರಿತು ಮಾಹಿತಿಯಿರುವ ಫಲಕಗಳನ್ನು ಹಿಡಿದುಕೊಂಡು ಮಹಿಳೆಯರು ಜಾಥಾದಲ್ಲಿ ಸಾಗಿದರು.
ಮತದಾನ ಜಾಗೃತಿ ಅಭಿಯಾನ ಜಾಥಾವು ಜಿಲ್ಲಾ ನ್ಯಾಯಾಲಯ ಆವರಣದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದವರೆಗೆ ಸಾಗಿ ಬಂದಿತು.
One attachment • Scanned by Gmail