ಕಾನ್ವೆಂಟ್ ಶಾಲೆ : ಜೂನಿಯರ್ ರೆಡ್ ಕ್ರಾಸ್ ಘಟಕ ಉದ್ಘಾಟನೆ

ರಾಯಚೂರು.ಸೆ೧೪- ನಗರದ ಸೇಂಟ್ ಮೇರಿಸ್ ಕಾನ್ವೆಂಟ್ ಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ಘಟಕ ಉದ್ಘಾಟನೆ ಮಾಡಲಾಯಿತು. ಉದ್ಘಾಟನೆಯನ್ನು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಗಳಾದ ಪರಶುರಾಮ ಹುಜರತೆ ಅವರು ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳು ಸೇವಾ ಮನೋಭಾವನೆಯನ್ನು ಬೆಳಿಸಿಕೊಂಡು ಪ್ರಥಮ ಚಿಕಿತ್ಸೆ ,ವಿಪತ್ತು ನಿವ೯ಹಣೆ , ತರಬೇತಿಗಳನ್ನು ಪಡೆಯಲು ತಿಳಿಸಿದರು. ಯುವ ರೆಡ್ ಕ್ರಾಸ್ ಸಮಿತಿ ಜಿಲ್ಲಾ ಸoಚಾಲಕ ವಿದ್ಯಾಸಾಗರ ಮಾತನಾಡಿ,ವಿಶ್ವದ ೧೯೩ ದೇಶಗಳಲ್ಲಿ ರೆಡ್ ಕ್ರಾಸ್ ಶಾಖೆಗಳನ್ನು ಹೊಂದಿದೆ ಎಂದು ತಿಳಿಸಿದರು.ಮೊಟ್ಟ ಮೊದಲ ಶಾಂತಿ ನೋಬಲ್ ಬಹುಮಾನವನ್ನು ರೆಡ್ ಕ್ರಾಸ್ ಸಂಸ್ಥಾಪಕ ಹೆನ್ರಿ ಡ್ಯುನಾಂಟ್ ಪಡೆದರು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಶಾಖೆಯ ಕಾರ್ಯದರ್ಶಿ ಅತಾವುಲ್ಲಾ ವಕೀಲರು ಮಾತನಾಡಿ, ಸಂಸ್ಥೆಯು ಶಾಲಾ ಮಕ್ಕಳಿಗೆ ಮುಂಬರುವ ದಿನಗಳಲ್ಲಿ ರಾಜ್ಯ ಮಟ್ಟದ ಜೂನಿಯರ್ ರೆಡ್ ಪರೀಕ್ಷೆಗಳನ್ನು ಆಯೋಸುತ್ತದೆ , ವಿದ್ಯಾರ್ಥಿಗಳು ರಾಜ್ಯ ಮಟ್ಟದ ಪರೀಕ್ಷೆಯಲ್ಲಿ ಪ್ರಥಮ ಬಹುಮಾನವನ್ನು ಪಡೆಯಲು ತಿಳಿಸಿದರು.
ಈ ಸಂದರ್ಭದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸದಸ್ಯ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರಾವುತರಾವ್ ಬರೂರ ವೇದಿಕೆ ಮೇಲೆ ಉಪಸ್ಥಿತರಿದ್ದರು .
ಈ ಸಂದರ್ಭದಲ್ಲಿ ಕಾನ್ವೆಂಟ್ ಶಾಲೆಯ ಮುಖ್ಯಸ್ಥರಾದ ಸಿಸ್ಟರ್ ಸುನಿತಾ ಸಲ್ದಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಸಿಸ್ಟರ್ ಹೆಲನ್ ಲೋಬೊ, ಸಿಸ್ಟರ್ ಸ್ಟೆಲನ್ ಲೋಬೋ ಅತಿಥಿಗಳಾಗಿ ಉಪಸ್ಥಿತರಿದ್ದರು. ಜೂನಿಯರ್ ರೆಡ್ ಕ್ರಾಸ್ ವಿಂಗಿನ ನಾಯಕರಾದ ರಮೀಜಾ ರಜಿನಾ ಸೇರಿದಂತೆ ಶಾಲೆಯ ಶಿಕ್ಷಕ ವೃಂದದವರು ಹಾಗೂ ಮಕ್ಕಳು ಉಪಸ್ಥಿತರಿದ್ದರು.
ದಯಮಾಡಿ ಈ ವರದಿಯನ್ನು ತಮ್ಮ ಪತ್ರಿಕೆಯಲ್ಲಿ ಪ್ರಕಟಿಸಲು ವಿನಂತಿ.