ಕಾಮಗಾರಿಗಳನ್ನು ನಿಗಧಿತ ಅವಧಿಯಲ್ಲಿ ಪೂರ್ಣಗೊಳಿಸಿ ಮತ್ತು ಗುಣಮಟ್ಟ ಕಾಯ್ದುಕೊಳ್ಳಿ

ಮೈಸೂರು: ಜೂ.27:- ಸಣ್ಣ ನೀರಾವರಿ ಇಲಾಖೆಯ ಎಲ್ಲಾ ಕಾಮಗಾರಿಗಳು ನಿಗದಿತ ಅವಧಿಯಲ್ಲಿ ಪೂರ್ಣ ಆಗುವುದರ ಜೊತೆಗೆ ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕು. ಕಾಗದದ ಮೇಲಿನ ಪ್ರಗತಿಯನ್ನು ಒಪ್ಪಲು ಸಾಧ್ಯವಿಲ್ಲ. ವಾಸ್ತವದ ನೆಲೆಯಲ್ಲಿ ಪ್ರಗತಿ ಆಗಬೇಕು. ಇಲ್ಲದಿದ್ದರೆ ಸಂಬಔಧಪಟ್ಟವರನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಸಣ್ಣ ನೀರಾವರಿ ಸಚಿವರಾದ ಬೋಸರಾಜುರವರು ತಾಕೀತು ಮಾಡಿದರು.
ನಗರದ ಪ್ರಾದೇಶಿಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಮೈಸೂರು ವಿಭಾಗ ಮಟ್ಟದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಇಲಾಖೆ ಇಂಜಿನಿಯರ್‍ಗಳಿಗೆ ಸ್ಥಳಕ್ಕೆ ನಿರಂತರವಾಗಿ ಭೇಟಿ ನೀಡಿದರೆ ಸಮಸ್ಯೆಯ ವಾಸ್ತವದ ಸ್ಥಿತಿಗತಿ ತಿಳಿಯುತ್ತದೆ. ಜೊತೆಗೆ ಪರಿಹಾರ ಕಂಡು ಹಿಡಿಯಲು ಸುಲಭವಾಗುತ್ತದೆ ಎಂದು ಸಲಹೆ ನೀಡಿದರು.
ತಮಗೆ ನೀಡುವ ಮಾಹಿತಿ ವಾಸ್ತವತೆಯಿಂದ ಕೂಡಿರಬೇಕು. ಕಾಗದ ಮೇಲಿನ ಅಂಕಿ ಅಂಶಗಳನ್ನು ನಂಬುವುದಿಲ್ಲ ಮಳೆಗಾಲ ಆರಂಭವಾಗಿದ್ದು, ಕೆರೆಗಳ ದುರಸ್ತಿ ಕೆಲಸ ತ್ವರಿತವಾಗಿ ಆಗಬೇಕು. ಕೆರೆಗಳು ಒಡೆದರೆ ಬಡ ರೈತರಿಗೆ ತೊಂದರೆಯಾಗುತ್ತದೆ. ಕೆರೆಕಟ್ಟೆಗಳು ಮತ್ತು ಏತ ನೀರಾವರಿ ಮೂಲಕ ಬೆಳೆಗಳಿಗೆ ಸಮರ್ಪಕವಾಗಿ ನೀರು ಒದಗಿಸಬೇಕು. ಸರ್ಕಾರ ಮತ್ತು ಇಲಾಖೆ ನಡುವೆ ಸಮನ್ವಯತೆ ಇದ್ದರೆ ಮಾತ್ರ ಸುಲಭವಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯ. ಹಿಂದೆ ತಪ್ಪುಗಳು ಆಗಿದ್ದರೆ ಸರಿಪಡಿಸಿಕೊಂಡು ಹೋಗಬೇಕು. ವಿಶೇಷ ಘಟಕ ಯೋಜನೆಯಡಿ ಅಂತರ್ಜಲ ಅಭಿವೃದ್ಧಿ ಮತ್ತು ಏತ ನೀರಾವರಿ ಯೋಜನೆಗಳ ಪುನರ್ಜೀವನಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದು ಇಂದಿನ ತುರ್ತು ಅಗತ್ಯವಾಗಿದೆ. ಈ ಬಗ್ಗೆ ನಿರ್ಲಕ್ಷ ಸಲ್ಲದು ಎಂದು ಇಂಜಿನಿಯರ್‍ಗಳಿಗೆ ಸೂಚಿಸಿದರು.
ಬಿಲ್ ಪಾವತಿ: ಈಗ ತಮ್ಮ ಇಲಾಖೆಯಿಂದ ಸಾವಿರಾರು ಕೋಟಿ ರೂಪಾಯಿ ಯೋಜನಾ ಕಾಮಗಾರಿಗಳು ಪ್ರಗತಿಯಲ್ಲಿವೆ. ಈ ನಡುವೆ ಹೊಸ ಯೋಜನೆಗಳನ್ನು ಆರಂಭಿಸಬೇಕಿದೆ. ಬಾಕಿ ಬಿಲ್ ಅನ್ನು ಜೇಷ್ಠತೆ ಮೇರೆಗೆ ವ್ಯವಸ್ಥಿತವಾಗಿ ನೀಡಬೇಕು. ಗೊಂದಲಕ್ಕೆ ಅವಕಾಶ ನೀಡಬಾರದು ಎಂದು ಮುಖ್ಯ ಇಂಜಿನಿಯರ್‍ಗೆ ಸೂಚಿಸಿ, ವಸ್ತು ಸ್ಥಿತಿಯಿಂದ ಕೂಡಿದ ವರದಿ ನೀಡಬೇಕು. ಕಠಿಣ ಸಮಸ್ಯೆ ಇದ್ದರೆ ಮೇಲಾಧಿಕಾರಿಗಳಿಗೆ ತಿಳಿಸಬೇಕು. ಕಾಮಗಾರಿಗಳ ಬಿಲ್ ಪಾವತಿ ಪಾರದರ್ಶಕವಾಗಿರಬೇಕು. ಹೊಸ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಜನರ ನಿರೀಕ್ಷೆಯಂತೆ ತಳಮಟ್ಟದ ಸಮಸ್ಯೆಯನ್ನು ಅರಿತು ಕೆಲಸ ಮಾಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಸಣ್ಣ ನೀರಾವರಿ ಇಲಾಖೆ ಮುಖ್ಯ ಇಂಜಿನಿಯರ್ ರಾಘವನ್, ಅಧೀಕ್ಷಕ ಇಂಜಿನಿಯರ್ ಕಿಶೋರ್ ಮತ್ತು ಮಂಗಳೂರು, ಹಾಸನ, ಮೈಸೂರು, ಚಿಕ್ಕಮಂಗಳೂರು, ಚಾಮರಾಜನಗರ, ಕೊಡಗು ಹಾಗೂ ಮಂಡ್ಯ ಜಿಲ್ಲೆಗಳ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.
ವರ್ಗಾವಣೆಗೆ ನೇರವಾಗಿ ನನ್ನ ಬಳಿ ಬನ್ನಿ ದಲ್ಲಾಳಿ ಬೇಡ
ಮೈಸೂರಿನಲ್ಲಿ ನಡೆದ ವಿಭಾಗ ಮಟ್ಟದ ಸಭೆಯಲ್ಲಿ ಮಾತನಾಡುತ್ತಾ ಸಣ್ಣ ನೀರಾವರಿ ಇಲಾಖೆ ಸಚಿವ ಬೋಸ್ ರಾಜುರವರು ವರ್ಗಾವಣೆ ವಿಚಾರಕ್ಕೆ ಸಂಬಔಧಿಸಿದಔತೆ ನೇರವಾಗಿ ನನ್ನ ಬಳಿಗೆ ಬನ್ನಿ. ಅನುಕೂಲ ಮಾಡಿಕೊಡೋಣ. ಆದರೆ ಈ ವಿಚಾರದಲ್ಲಿ ಮಧ್ಯವರ್ತಿಗಳು ಬೇಡ. ಏನೇ ಸಮಸ್ಯೆ ಇದ್ದರೂ ಕೂಡ ನನ್ನ ಬಳಿಯೇ ಹೇಳಿ ಎಂದು ಇಲಾಖೆ ಇಂಜಿನಿಯರ್ ಗಳಿಗೆ ಕಿವಿಮಾತು ಹೇಳಿದರು.