ಕಾಮಗಾರಿಗಳ ಗುಣಮಟ್ಟಕ್ಕೆ ಪ್ರಾಮುಖ್ಯತೆ ನೀಡಿ: ಆನಂದ್ ಸಿಂಗ್

ಬಳ್ಳಾರಿ ಜ 13 : ಜಿಲ್ಲೆಯ ಹೊಸಪೇಟೆ ನಗರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಿ, ಶೀಘ್ರದಲ್ಲಿ ಕೆಲಸ ಪೂರ್ಣಗೊಳಿಸುವಂತೆ ಅರಣ್ಯ ಸಚಿವ ಆನಂದ್ ಸಿಂಗ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅವರು ನಿನ್ನೆ ಹುಡಾ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ನಗರದಲ್ಲಿ ನಡೆಯುತ್ತಿರುವ ಫ್ಲೈಓವರ್ ಬ್ರಿಡ್ಜ್ ಹಾಗೂ ರೈಲ್ವೆ ಓವರ್ ಬ್ರಿಡ್ಜ್ ನಿರ್ಮಾಣ ಕಾಮಗಾರಿ ಕುರಿತು ಸಮಾಲೋಚನೆ ನಡೆಸಿದರು.ಪ್ರಗತಿಯಲ್ಲಿರುವ ಕಾಮಗಾರಿಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಿ, ಗುಣಮಟ್ಟಕ್ಕೆ ಪ್ರಾಮುಖ್ಯತೆ ನೀಡಬೇಕು ಎಂದು ಸೂಚಿಸಿದರು.ಈ ಸಂದರ್ಭದಲ್ಲಿ ಹುಡಾ ಅಧ್ಯಕ್ಷರು, ರೈಲ್ವೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು