ಕಾಮಗಾರಿಗಳ ಪರಿಶೀಲನೆ

ಗದಗ,ಜ4: ಗದಗ ನಗರದಲ್ಲಿ ನಡೆಯುತ್ತಿರುವ ರಸ್ತೆ ಹಾಗೂ ಪ್ರಮುಖ ವೃತ್ತಗಳ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಮುಕ್ತವಾಗಿಸುವಂತೆ ಜಿಲ್ಲಾದಿಕಾರಿಗಳಾದ ಎಂ. ಸುಂದರೇಶ ಬಾಬು ಅವರು ಸೂಚಿಸಿದರು.

ನಗರದ ಕರಿಯಪ್ಪ ವೃತ್ತದಿಂದ ಹೊಸ ಬಸ ನಿಲ್ದಾಣದ ವರೆಗಿನ ರಸ್ತೆ ಕಾಮಗಾರಿ ಹಾಗೂ ಒಳಚರಂಡಿ, ಪ್ರಮುಖ ವೃತ್ತಗಳ ಕಾಮಗಾರಿಗಳನ್ನು ವೀಕ್ಷಿಸಿದ ಜಿಲ್ಲಾಧಿಕಾರಿಗಳು, ನಿಗದಿತ ಅವಧಿಯೊಳಗೆ ಗುಣಮಟ್ಟದ ಕಮಗಾರಿ ಪೂರ್ಣಗೊಳಿಸಲು ಸೂಚಿಸಿದರು. ಹಲವು ದಿನಗಳಿಂದ ಕಾಮಗಾರಿ ನಡೆಯುತ್ತಿರುವುದರಿಂದ ಸಾರ್ವಜನಿಕರಿಗೆ ದೈನಂದಿನ ಸಾರ್ವಜನಿಕರಿಗೆ ಆಗುತ್ತಿರುವ ಸಂಚಾರ ಅಡಚಣೆ ತಪ್ಪಿಸಬೇಕು. ಕೂಡಲೇ ನಿಯೋಜಿಸಿದ ಸಂಸ್ಥೆಗಳು ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡುವಂತೆ ಸೂಚನೆ ನೀಡಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೆಶಕ ರುದ್ರೇಶ ಎಸ್.ಎನ್, ಗದಗ ಬೆಟಗೇರಿ ನಗರಸಭೆಯ ಪೌರಾಯುಕ್ತ ರಮೇಶ ಜಾದವ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.