ಕಾಮಗಾರಿಗಳ ಪ್ರಗತಿ ಪರಿಶೀಲನೆ


ಸಂಜೆವಾಣಿ ವಾರ್ತೆ
ಸಿರುಗುಪ್ಪ:ಅ,2-  2022-23ನೇ ಸಾಲಿನಲ್ಲಿ ಜಿಲ್ಲಾ ಖನಿಜನಿಧಿಯ ಅನುದಾನದಡಿ ಕೈಗೊಂಡ ವಿವಿಧ ಕಾಮಗಾರಿಗಳ ಪ್ರಗತಿಯನ್ನು ಜಿಲ್ಲಾಧಿಕಾರಿ ಪ್ರಶಾಂತ ಕುಮಾರ್ ಮಿಶ್ರ ಪರಿಶೀಲಿಸಿದರು.
ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಒಳ ಕ್ರೀಡಾಂಗಣ, ಪ್ರೌಢ ಶಾಲೆ, ಪಿಯು ಕಾಲೇಜು, ಪ್ರಥಮ ದರ್ಜೆ ಕಾಲೇಜಿನ ತರಗತಿ ಕೊಠಡಿಗಳ ನಿರ್ಮಾಣ ಕಾಮಕಾರಿ ವೀಕ್ಷಿಸಿದರು. ಕುಡಿಯುವ ನೀರಿನ ಕೆರೆಯ ಮಾಹಿತಿ ಪಡೆದರು. ಎರಡನೇ ಹಂತದ ಜಲಜೀವನ್ ಮಿಷನ್ ಕಾಮಗಾರಿ ಕುರಿತು ಚರ್ಚೆ ನಡೆಸಿ, ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ನಡೆಸಲು ಗುತ್ತಿಗೆದಾರರಿಗೆ ಸೂಚಿಸಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುದ್ಧ ಕುಡಿಯುವ ನೀರಿನ ಸಮಸ್ಯೆ ಕುರಿತು ಪ್ರಾಂಶುಪಾಲರು ಮತ್ತು ಉಪನ್ಯಾಸಕರು ತಿಳಿಸಿದರು.
ತಹಶೀಲ್ದಾರ್ ಎಚ್. ವಿಶ್ವನಾಥ, ತಾಲ್ಲೂಕು ಆರೋಗ್ಯಾಧಿಕಾರಿ ಈರಣ್ಣ, ಪೌರಾಯುಕ್ತ ಕೆ.ಜೀವನಕುಮಾರ್, ಪ್ರಾಂಶುಪಾಲ ವೀರಭದ್ರಪ್ಪ,
ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥ, ಕಾರ್ಯನಿರ್ವಾಹಕ ಅಭಿಯಂತರ ಹೇಮರಾಜ್,
ಆರ್.ಓ ಕಾರ್ಯನಿರ್ವಾಹಕ ಅಭಿಯಂತರ ವಿನೋದ್ ಕುಮಾರ್ ಗುಪ್ತ , ಪೌರಾಯುಕ್ತ ಕೆ. ಜೀವನ್ ಕುಮಾರ್,
ನೀರು ಮತ್ತು ನೈರ್ಮಲ್ಯ ಎಇಇ ರವಿಂದ್ರ ನಾಯ್ಕ, ಜೆಇ ಕಾಂತರಾಜ್ ಇದ್ದರು.