ಕಾಮಗಾರಿ ಆದೇಶ ಪತ್ರ ವಿತರಣೆ


ಸಂಜೆವಾಣಿ ವಾರ್ತೆ
ಹರಪನಹಳ್ಳಿ, ಜು.31: ತಾಲ್ಲೂಕಿನ ಅರಸೀಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಶ್ರಯ ಯೋಜನೆ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರ ವಿತರಣೆ ಮಾಡಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ವೈ.ಟಿ ರೇಖಾ ಕೊಟ್ರೇಶ್ ಮಾತನಾಡಿ, ಆದೇಶ ಪತ್ರ ಪಡೆದ ಫಲಾನುಭವಿಗಳು ಕೂಡಲೇ ಮನೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಬೇಕು.
ಆಶ್ರಯ ಪಡೆದ ವರ್ಷದೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು.ಪ್ರತಿ ಫಲಾನುಭವಿಗಳು ಶೌಚಾಲಯ ನಿರ್ಮಾಣ ಮಾಡಿಕೊಳ್ಳಬೇಕು.
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿವೇಶನ ರಹಿತರು ಬಹಳ ಜನರಿದ್ದಾರೆ. ಮುಂದಿನ ದಿನಗಳಲ್ಲಿ ಅರ್ಹ ಫಲಾನುಭವಿಗಳಿಗೆ ಆಶ್ರಯ, ನಿವೇಶನ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಪಿಡಿಓ ಅಂಜಿನಪ್ಪ,ಸದಸ್ಯರಾದ ಅದಾಮ್ ಸಾಬ್, ಅಡ್ಡೆರ ಚನ್ನವೀರಪ್ಪ ಮುಖಂಡರಾದ ವೈ.ಟಿ ಕೊಟ್ರೇಶ್, ದಂಡ್ಯಪ್ಪ, ಅಬ್ದುಲ್ ಸಾಬ್ ಇದ್ದರು.