ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು

ರಾಯಚೂರು,ಏ.೦೮-ನಗರದ ರಿಮ್ಸ್ ಆಸ್ಪತ್ರೆಯಲ್ಲಿ ನಿರ್ಮಾಣ ಹಂತದಲ್ಲಿರುವ ೧೩೦ ಹಾಸಿಗೆಯುಳ್ಳ ಆಸ್ಪತ್ರೆ ಕಟ್ಟಡದ ನಿರ್ಮಾಣ ಕಾಮಗಾರಿ ಹಾಗೂ ಸುತ್ತಲಿನ ಪ್ರದೇಶವನ್ನು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಅವರು ಪರಿಶೀಲಿಸಿದರು.
ರಿಮ್ಸ್ ಆಸ್ಪತ್ರೆಯ ಹಿಂಬದಿಯಲ್ಲಿ ೧೩೦ ಹಾಸಿಗೆಯ ನೂತನ ಆಸ್ಪತ್ರೆ ಕಟ್ಟಡ ನಿರ್ಮಿಸಲಾಗುತ್ತಿದೆ. ಆಸ್ಪತ್ರೆಯ ಮುಂದೆ ಉತ್ತಮ ರಸ್ತೆ, ಉದ್ಯಾನವನ ನಿರ್ಮಾಣ ಸೇರಿದಂತೆ ಅಲ್ಲಿ ಒದಗಿಸಬೇಕಾದ ಮೂಲ ಸೌಕರ್ಯಗಳ ಕುರಿತು ರಿಮ್ಸ್ ನಿರ್ದೇಶಕ ಡಾ. ಬಸವರಾಜ ಪೀರಾಪುರ, ಜಿಲ್ಲಾ ಸರ್ಜನ್ ಡಾ. ವಿಜಯ್ ಶಂಕರ್ ಹಾಗೂ ಇತರೆ ಅಧಿಕಾರಿಗಳೊಂದಿಗೆ Zರ್ಚಿಸಿ, ಸಲಹೆಗಳನ್ನು ನೀಡಿದರು.