ಕಾಮಗಾರಿ ಸ್ಥಳದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ


ಸಂಜೆವಾಣಿ ವಾರ್ತೆ
ಕಾರಟಗಿ: ಮೇ :24: ಗ್ರಾ.ಪಂ ವ್ಯಾಪ್ತಿಯಲ್ಲಿನ ಪ್ರತಿಯೊಬ್ಬ ಕೂಲಿಕಾರರು ಬಿಪಿ, ಸಕ್ಕರೆ ಕಾಯಿಲೆ, ಕ್ಷಯರೋಗ ಇನ್ನಿತರ ಸಣ್ಣಪುಟ್ಟ ಕಾಯಿಲೆಗಳಿದ್ದರೆ ಕಡ್ಡಾಯವಾಗಿ ತಪಾಸಣೆ ಮಾಡಿಕೊಳ್ಳಬೇಕು ಎಂದು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರಮೇಶ್ ತಿಮ್ಮಾರೆಡ್ಡಿ ಅವರು ಹೇಳಿದರು.
ತಾಲೂಕಿನ ಯರಡೋಣ ಗ್ರಾಮ ಪಂಚಾಯತಿಯ ಕೂಲಿಕಾರರಿಗೆ ನರೇಗಾದಡಿ ಜೀರಾಳ್ ಕೆರೆ ಹೂಳೆತ್ತುವ ಕೆಲಸ ನೀಡಲಾಗಿದ್ದು, ಕಾಮಗಾರಿ ಸ್ಥಳದಲ್ಲಿ ಇಂದು ಗ್ರಾಮ ಪಂಚಾಯತಿ ಹಾಗೂ ಆರೋಗ್ಯ ಅಮೃತ ಅಭಿಯಾನ ಯೋಜನೆಯಡಿ ಕೂಲಿಕಾರರಿಗೆ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೂಲಿಕಾರರಿಗೆ ಕೆಲಸ ಕೊಡುವುದಷ್ಟೇ ಅಲ್ಲದೇ, ಕೂಲಿಕಾರರ ಆರೋಗ್ಯವನ್ನು ಕಾಪಾಡುವುದು ನಮ್ಮ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಗ್ರಾಮ ಆರೋಗ್ಯ ಶಿಬಿರವನ್ನು ಆಯೋಜಿಸಲಾಗದೆ. ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ತಮ್ಮ ತಮ್ಮ ಆರೋಗ್ಯ ತಪಾಸಣೆಯನ್ನು ಮಾಡಿಕೊಳ್ಳಬೇಕು ಎಂದರು.
ನಂತರ ಆರೋಗ್ಯ ಇಲಾಖೆ ಸಿಬ್ಬಂದಿಗಳು ಕೂಲಿಕಾರರ ಬಿಪಿ, ಶುಗರ್‌, ಸೇರಿದಂತೆ ಕೆಮ್ಮು, ನೆಗಡಿ, ಜ್ವರ ಇನ್ನಿತರ ಸಣ್ಣಪುಟ್ಟ ಖಾಯಿಲೆಗಳ ಕುರಿತು ತಪಾಸಣೆ ನಡೆಸಿ, ಮಾತ್ರೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಐಇಸಿ ಸಂಯೋಜಕ‌ ಸೋಮನಾಥ ನಾಯಕ, ಗ್ರಾ.ಪಂ ಕಾರ್ಯದರ್ಶಿ ಹನುಮಂತಪ್ಪ, ಯರಡೋಣ ಉಪ ಕೇಂದ್ರದ ಸಿಬ್ಬಂದಿಗಳಾದ ಶರಣಪ್ಪ, ಶ್ರೀದೇವಿ, ಗ್ರಾ.ಪಂ ಸಿಬ್ಬಂದಿಗಳಾದ ಗ್ಯಾನಪ್ಪ, ರಮೇಶ್, ದೊಡ್ಡಬಸವ, ಆಶಾ ಕಾರ್ಯಕರ್ತೆಯರಾದ ದಾನಮ್ಮ ,ರೇಣುಕಾ, ಕಮಲಮ್ಮ, ನಿರ್ಮಲಾ, ಬಿಎಫ್ಟಿ ಯಮನಪ್ಪ, ಗ್ರಾಮ ಕಾಯಕ ಮಿತ್ರ ಶಿಲ್ಪಾ ಸೇರಿ ಕೂಲಿಕಾರರರು ಇದ್ದರು.

One attachment • Scanned by Gmail