ಕಾಮನ್‌ವೆಲ್ತ್ ಕ್ರೀಡಾಕೂಟದಿಂದ ಹಿಂದೆ ಸರಿದ ನೀರಜ್

ನವದೆಹಲಿ, ಜು. ೨೬- ಗಾಯದ ಸಮಸ್ಯೆಯಿಂದ ಬಳಲುತ್ತಿರುವ ನೀರಜ್ ಚೋಪ್ರಾ ಅವರು ೨೦೨೨ ರ ಕಾಮನ್‌ವೆಲ್ತ್ ಕ್ರೀಡಾಕೂಟದಿಂದ ಹಿಂದೆ ಸರಿದಿದ್ದಾರೆ
ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ಅವರು ಫಿಟ್‌ನೆಸ್ ಕಾಳಜಿಯಿಂದಾಗಿ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಗೇಮ್ಸ್‌ನಿಂದ ಹಿಂದೆ ಸರಿದಿದ್ದಾರೆ.ನೀರಜ್ ಚೋಪ್ರಾ ಅವರು ಇತ್ತೀಚೆಗೆ ಯುಜೀನ್ ಒರೆಗಾನ್‌ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದರು.

ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಪ್ರಧಾನ ಕಾರ್ಯದರ್ಶಿ ರಾಜೀವ್ ಮೆಹ್ತಾ, ಚೋಪ್ರಾ ಅವರು ಮಾತನಾಡಿ ನೀರಜ್ ಚೋಪ್ರಾ ಅವರಲ್ಲಿ ತೊಡೆಸಂದು ಗಾಯವನ್ನು ಎಂಆರ್‌ಐ ತೋರಿಸಿದ ನಂತರ ವೈದ್ಯರು ಒಂದು ತಿಂಗಳ ವಿಶ್ರಾಂತಿಗೆ ಸಲಹೆ ನೀಡಿದ್ದಾರೆ. ನೀರಜ್ ಚೋಪ್ರಾ ಅವರು ಗೋಲ್ಡ್ ಕೋಸ್ಟ್‌ನಲ್ಲಿ ನಡೆದ ೨೦೧೮ ರ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದಿದ್ದರಿಂದ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಪ್ರಶಸ್ತಿಗಾಗಿ ಪ್ರಬಲ ಸ್ಪರ್ಧಿಯಾಗಿದ್ದರು ಎಂದು ಹೇಳಿದ್ದಾರೆ.

ಚೋಪ್ರಾ ಅವರು ತಮ್ಮ ನಾಲ್ಕನೇ ಪ್ರಯತ್ನದಲ್ಲಿ ೮೮.೧೩ ಮೀ ಎಸೆಯುವ ಮೂಲಕ ಯುಜೀನ್‌ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ೨೦೨೨ ರಲ್ಲಿ ಪುರುಷರ ಜಾವೆಲಿನ್ ಥ್ರೋ ಫೈನಲ್‌ನಲ್ಲಿ ಬೆಳ್ಳಿ ಪದಕವನ್ನು ಗಳಿಸಿದರು. ಇದು ಅವರ ಚೊಚ್ಚಲ ವಿಶ್ವ ಚಾಂಪಿಯನ್‌ಶಿಪ್ ಪದಕವಾಗಿದ್ದು, ಮುಂಬರುವ ಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್ ಗೇಮ್ಸ್ ೨೦೨೨ ರಲ್ಲಿ ಚಿನ್ನದ ಪದಕಕ್ಕಾಗಿ ನಿರೀಕ್ಷಿಸಲಾಗಿತ್ತು.