ಕಾಮಿಡಿ ಜಾನರ್ ನ ಹುಷಾರ್

ಸಂಪೂರ್ಣ ಹೊಸಬರ ” ಹುಷಾರ್” ಸಿನಿಮಾ ಸೆಟ್ಟೇರಿದೆ. ಹಿರಿಯ ನಿರ್ದೇಶಕ ಭಗವಾನ್ ಮತ್ತು ಎನ್.ಎಂ ಸುರೇಶ್ ಆಗಮಿಸಿ ಕ್ಲಾಪ್ ಮಾಡಿ ಹೊಸಬರ ಪ್ರಯತ್ನಕ್ಕೆ ಶುಭ ಹಾರೈಸಿದರು.

ನಿರ್ದೇಶಕ ಮತ್ತು ನಿರ್ಮಾಪಕ ಸತೀಶ್ ರಾಜ್,ಏನೇ ಮಾಡುವಾಗ ಹುಷಾರಪ್ಪ, ಹುಷಾರು ಎಂದು ಹೇಳುತ್ತೇವೆ. ಈಗ ಅದೇ‌ ಶೀರ್ಷಿಕೆಯಾಗಿವೆ. ಸುತ್ತಲಿನವರೇ ಮಾಡುವ ಕೆಲಸಗಳು, ಹೇಗೆ ಸಮಾಜಕ್ಕೆ ಕಂಟಕವಾಗುತ್ತವೆ. ಆ ಎಚ್ಚರಿಕೆ ಸಂದೇಶವನ್ನೇ ನಾವಿಲ್ಲಿ ಹೇಳಹೊರಟಿದ್ದೇವೆ’. ಹಳ್ಳಿಗಾಡಿನಲ್ಲಿ ನಡೆಯುವ ಕಥೆ ಇದಾಗಿದ್ದು, ಸಾಮಾಜಿಕ ಜವಾಬ್ದಾರಿಯುಳ್ಳ ಯುವಕ ಹೇಗೆ ಬದಲಾವಣೆಗೆ ನಾಂದಿ ಹಾಡುತ್ತಾನೆ ಎಂಬುದೇ ಹುಷಾರು ಚಿತ್ರ ಒಂದೆಳೆ’ ಎಂದರು.
ನಾಯಕ ವಿಜಯ್ ಮಹೇಶ್ ,ಗ್ರಾಮೀಣ ಸೊಗಡಿನ ಸಿನಿಮಾದಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಆ ಅವಕಾಶ ಸಿಕ್ಕಿದೆ. ಕಾಮಿಡಿ ಎಳೆಯಿಂದ ಶುರುವಾಗುವ ಕಥೆ, ನಿಧಾನಕ್ಕೆ ಹಾರರ್ ನತ್ತ ಹೊರಳುತ್ತದೆ. ತಾಳುತ್ತದೆ.‌ಟ್ವಿಸ್ಟ್ ಗಳು ಕಮರ್ಷಿಯಲ್ ಅಂಶಗಳೂ ಸಿನಿಮಾದಲ್ಲಿರಲಿವೆ‌ ಎಂದರು.
ನಟಿ ಸುಲಕ್ಷಾ ಕೈರ,ನಾಯಕಿ. ‘ಸಾಂಪ್ರದಾಯಿಕ ಹುಡುಗಿ ಜೊತೆಗೆ ಶಿಕ್ಷಕಿ ಪಾತ್ರ ನಮ್ಮ ಹುಷಾರಲ್ಲಿ ನಾವಿರಬೇಕು ಎನ್ನುವ ತಿರುಳು ಹೊಂದಿದೆ ಎಂದರೆ,ಮತ್ತೋರ್ವ ನಟಿ ರಚನಾ ಮಲ್ನಾಡ್ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.
ಲಯ ಕೋಕಿಲ, ಗಣೇಶ್ ರಾವ್, ಪಿ. ಮೂರ್ತಿ, ಸತೀಶ್ ರಾಜ್, ಪುಷ್ಪ ಸ್ವಾಮಿ, ರತ್ನಮಾಲ, ಮೂಗು ಸುರೇಶ್, ಪ್ರಶಾಂತ್ ನಟನ, ವೆಂಕಟೇಶ್ ಹೇರೊಹಳ್ಳಿ, ವಸಂತ್ ಕುಮಾರ್ ಸೇರಿ ಮುಂತಾದವರು ಪಾತ್ರವರ್ಗದಲ್ಲಿದ್ದಾರೆ.

ಎರಡನೇ ವಾರದಲ್ಲಿ ಶೃಂಗೇರಿ, ಹೊರನಾಡು, ಕುದುರೆಮುಖ ಸೇರಿ ಹಲವೆಡೆ 25 ದಿನ ಚಿತ್ರೀಕರಣ ನಡೆಯಲಿದೆ. 10 ದಿನಗಳಲ್ಲಿ ಗೋವಾ ಸುತ್ತಮುತ್ತ ನಾಲ್ಕು ಹಾಡಿನ ಶೂಟಿಂಗ್ ಮಾಡಿಕೊಳ್ಳುವ ಯೋಜನೆ ಚಿತ್ರತಂಡದ್ದು. ಪೂರ್ಣಚಂದ್ರ ಛಾಯಾಗ್ರಹಣ, ಎಸ್. ನಾಗು ಸಂಗೀತವಿದೆ.