ಕಾಯಕಲ್ಪ ಯೋಜನೆಗೆ ಹೆಚ್ಚಿನ ಮಹತ್ವ ನೀಡಿ- ಡಿಸಿ

ನ್ಯಾಮೋನಿಯ ತರಬೇತಿ ಕಾರ್ಯಾಗಾರ
ರಾಯಚೂರು, ನ.೫, ಕಾಯಕಲ್ಪ ಯೋಜನೆಗೆ ಹೆಚ್ಚಿನ ಮಹತ್ವ ನೀಡಿವುದರ ಮೂಲಕ ಜಿಲ್ಲೆಯಲ್ಲಿ ಹರಡುವ ಸಾಂಕ್ರಾಮಿಕ ಅರೋಗ್ಯವನ್ನು ತಡೆಗಟ್ಟುವಲ್ಲಿ ವೈದ್ಯಾಧಿಕಾರಿಗಳು ಹಾಗೂ ಆಶಾಕಾರ್ಯಕರ್ತರು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ್ ಹೇಳಿದರು.
ಅವರಿಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ ಸಾಮಾಜಿಕ ಜಾಗೃತಿ ಮತ್ತು ನ್ಯೂಮೋನಿಯನ್ನು ನಿಯಂತ್ರಣವಾಗಿ ತಡೆಗಟ್ಟುವ ಒಂದು ದಿನದ ಕಾರ್ಯಾಗಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನ.೧೨ ರಿಂದ ಪ್ರಾರಂಭವಾಗಿ ಫೆಬ್ರವರಿ ವರೆಗೂ ಕಾರ್ಯಾಗಾರವನ್ನು ಮುಂದುವರೆದು ಆಶಾಕಾರ್ಯ ಕಾರ್ಯಕರ್ತರು ಇದನ್ನು ಸದುಪಯೋಗ ಪಡಿಸಿಕೊಂಡು ಜಿಲ್ಲೆಯಲ್ಲಿ ನ್ಯಾಮೋನಿಯ ಕಾಯಿಲೆಯಿಂದ ಮಕ್ಕಳು ಸಾವನ್ನಪದಂತೆ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಿ ಮಕ್ಕಳ ಸಾವಿನ ಸಂಖ್ಯೆ ಇಳಿಕೆ ಮಟ್ಟದಲ್ಲಿ ಬರಲು ಕ್ರಮವಹಿಸಬೇಕು ಎಂದರು.ನ್ಯಾಮೋನಿಯ ಕಾಯಿಲೆಯಿಂದ ೫ ವರ್ಷದ ಕೆಲ ಹಂತದ ಮಕ್ಕಳು ಉಸಿರಾಟ ತೊಂದರೆಯಿಂದ ಸಾವನ್ನಪ್ಪಿತ್ತಿದ್ದಾರೆ
ನ್ಯೂಮೋನಿಯ ಒಂದು ಗಂಭೀರ ಸ್ವರೂಪದ ಆರೋಗ್ಯ ಸಮಸ್ಯೆ. ಮುಖ್ಯವಾಗಿ ಮಕ್ಕಳಲ್ಲಿ ಮತ್ತು ತುಂಬಾ ವಯಸ್ಸಾದವರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಏಕೆಂದರೆ ಅವರಲ್ಲಿ ರೋಗ ನಿರೋಧಕ ಶಕ್ತಿ ತುಂಬಾ ಕಡಿಮೆ ಇರುತ್ತದೆ. ಆಶಾಕಾರ್ಯಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಉತ್ತಮ ಚಿಕೆತ್ಸೆ ಕೊಡುಸುವ ಕಾರ್ಯ ಮಾಡಬೇಕು ಎಂದು ಸಲಹೆ ನೀಡಿದರು.ತಾಲೂಕು ಮಟ್ಟದ ವೈದ್ಯಾಧಿಕಾರಿಗಳು ಹಾಗೂ ಆಶಾಕಾರ್ಯಕರ್ತರು ವಿವಿಧ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಜನರಿಗೆ ತಲುಪುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದರು. ಜನರ ಅರೋಗ್ಯ ಹಿತದೃಷ್ಟಿಯಿಂದ ಕೇಂದ್ರ ಮತ್ತು ರಾಜ್ಯ ಸರಕಾರ ಜಾರಿಗೆ ತಂದಿರುವ ಅಯುಷ್ಮಾನ್ ಭಾರತ್ ಅರೋಗ್ಯ ಕಾರ್ಡ್ ಗಳನ್ನು ಜಿಲ್ಲೆಯಲ್ಲಿ ಗರಿಷ್ಠ ೧೬ ಲಕ್ಷ ಕಾರ್ಡ್ ಗಳನ್ನು ವಿತರಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾಯಕಲ್ಪ ಯೋಜನೆಗೆ ಹೆಚ್ಚಿನ ಮಹತ್ವ ನೀಡಿ ೧೬ ತಿಂಗಳು ಒಳಗೆ ಈ ಯೋಜನೆ ಜನರಿಗೆ ತಲುಪಿಸುವ ಕಾರ್ಯ ಮಾಡಬೇಕೆಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಧಿಕಾರಿ ಶಶಿಧರ್ ಕರೇರು ಮಾತನಾಡಿ ಮಹತ್ವಕಾಂಕ್ಷಿ ರಾಯಚೂರು ಜಿಲ್ಲೆ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರಕಾರ ಅನೇಕ ಯೋಜನೆಗಳು ಜಾರಿಗೊಳಿಸಿದ್ದು ಇದನ್ನು ಸಮಗ್ರವಾಗಿ ಅನುಷ್ಠಾನಗೊಳಿಸಬೇಕೆಂದು ಸೂಚನೆ ನೀಡಿದರು. ಮಕ್ಕಳ ಜೀವ ಉಳಿಸುವ ಶಕ್ತಿ ಆಶಾಕಾರ್ಯಕರ್ತರು ಮೇಲಿದೆ. ಜನರ ಅರೋಗ್ಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲೆಯಲ್ಲಿ ಸಂಭವಿಸುವ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಗ್ರಾಮೀಣ ಮಟ್ಟ ಹಾಗೂ ಸ್ಥಳೀಯ ಮಟ್ಟದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಗ್ರಾಮೀಣ ಮಟ್ಟದಲ್ಲಿ ಆಶಾ ಕಾರ್ಯಕರ್ತರು ಅರೋಗ್ಯ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಜನರ ಅರೋಗ್ಯ ಕಾಪಾಡುವಲ್ಲಿ ಆಶಾಕಾರ್ಯಕರ್ತರ ಸೇವೆ ಮಹತ್ವವಾಗಿರುತ್ತದೆ ಎಂದರು. ಫಾರಮೆಡಿಕಲ್ ಕಳಪೆ ಮಟ್ಟದ ವ್ಯವಹಾರ ನಡೆಸಿದರೆ ಅಂತವರು ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಸುರೇಂದ್ರ ಬಾಬು, ಐಎಎಸ್ ಅಧಿಕಾರಿ ಅಪರ್ಣ, ಡಾ. ಚೇತನ್, ವೈಧ್ಯಾಧಿಕಾರಿಗಳು ಹಾಗೂ ಆಶಾಕಾರ್ಯಕರ್ತರು ಸೇರಿದಂತೆ ಉಪಸ್ಥಿತರಿದ್ದರು.