ಕಾರಂಜಾ ಜಲಾಶಯದಿಂದ ಕಾರಂಜಾ ನದಿಗೆ ನೀರು ಬಿಡುಗಡೆ

ಬೀದರ, ಜು.22: ಕಾರಂಜಾ ಜಲಾಶಯ ಮೇಲ್ಭಾಗದ ಪ್ರದೇಶದಲ್ಲಿ ವ್ಯಾಪಕವಾಗಿ ನಿರಂತರವಾಗಿ ಮಳೆಯಾಗುತ್ತಗಿರುವುದರಿಂದ ಜಲಾಶಯದ ಒಳಹರಿವು ಹೆಚ್ಚಾಗುತ್ತಲಿರುವುದರಿಂದ ಜಲಾಶಯವು ಯಾವುದೇ ಕ್ಷಣದಲ್ಲಿ ಭರ್ತಿಯಾಗುವ ಹಂತದಲ್ಲಿರುತ್ತದೆ. ಸದರಿ ಜಲಾಶಯದ ಗರಿಷ್ಠ ಮಟ್ಟ ತಲುಪುವ ಸಂಭವ ಕಂಡಲ್ಲಿ ತಕ್ಷಣ ಕಾರಂಜಾ ಜಲಾಶಯದ ಗೇಟಗಳನ್ನು ತೆರೆದು ನದಿಗೆ ನೀರು ಬಿಡಲಾಗುವುದು.

ಪ್ರಯುಕ್ತ ಜಲಾಶಯದ ಕೆಳಭಾಗದ ಗ್ರಾಮಗಳಲ್ಲಿ ನದಿ ಪ್ರವಾಹದಿಂದ ತೊಂದರೆ ಉಂಟಾಗಬಹುದಾಗಿದೆ. ನದಿಯ ಕೆಳಭಾಗದ ತಳಪಾತ್ರದ ಅಕ್ಕಪಕ್ಕದ ಜನರು, ಸಾರ್ವಜನಿಕರು ನದಿಯಲ್ಲಿ ಇಳಿಯುವುದಾಗಲಿ, ಬಟ್ಟೆ ಒಗೆಯುವುದಾಗಲಿ, ಈಜುವುದಾಗಲಿ, ದನಕರುಗಳಿಗೆ ನೀರು ಕುಡಿಸುವುದಾಗಲಿ ಮಾಡಬಾರದು. ನದಿ ಪಾತ್ರದಲ್ಲಿರುವ ಸಣ್ಣ ನೀರಾವರಿ ಇಲಾಖೆ ಮತ್ತು ಇನ್ನೀತರ ಯಾವುದೇ ಇಲಾಖೆಗಳಿಗೆ ಸಂಬಂಧಪಟ್ಟ ಆಸ್ತಿಗಳಿದ್ದಲ್ಲಿ ಸಂರಕ್ಷಿಸಿಕೊಳ್ಳಲು ಮುಂಜಾಗೃತೆ ವಹಿಸಿಕೊಳ್ಳುವಂತೆ ಬೀದರ ಕರ್ನಾಟಕ ನೀರಾವರಿ ನಿಗಮ ನಿಯಮಿತ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.