ಕಾರಂಜಾ ಯೋಜನೆ ಇಇ ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ

ಬೀದರ್: ಮಾ.27:ಕಾರಂಜಾ ಯೋಜನಾ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಶಿವಕುಮಾರ ಸ್ವಾಮಿ ಅವರ ಮನೆ, ಕಚೇರಿ ಮೇಲೆ ಲೋಕಾಯುಕ್ತ ಪೆÇಲೀಸರು ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದು, ಕಡತಗಳನ್ನು ಪರಿಶೀಲಿಸುತ್ತಿದ್ದಾರೆ.

ಭಾಲ್ಕಿ ಪಟ್ಟಣದ ಕಾರಂಜಾ ಕಚೇರಿ, ಬೀದರ್ ನಗರದ ಕೃಷಿ ಕಾಲೊನಿ, ಬೀದರ್ ತಾಲ್ಲೂಕಿನ ನಾಗೂರ್ ಗ್ರಾಮದ ಮನೆ, ಕಲಬುರಗಿ ನಗರದ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಆರೋಪದ ಮೇರೆಗೆ ಲೋಕಾಯುಕ್ತ ಡಿವೈಎಸ್ಪಿ ನೀಲಪ್ಪ ಓಲೇಕಾರ್ ನೇತೃತ್ವದಲ್ಲಿ ದಾಳಿ ನಡೆದಿದೆ.